ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ವಿಜೇತರಾಗಿದ್ದಾರೆ. ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ.
2018ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಇವರು ಅಮೆರಿಕದಲ್ಲಿ ಇತ್ತೀಚೆಗೆ ನಡೆದ ಮಿನಿ ವಿಶ್ವ ಸುಂದರಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೊದಲು 2018 ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ, ಈಗ ಅಮೆರಿಕದಲ್ಲಿ ನಡೆದ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಅಮೆರಿಕದಲ್ಲಿ ಕಳೆದ ಜೂ.6 ರಿಂದ 10ರ ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸುಂದರಿಯರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವೈಯಕ್ತಿಕ ಸಂದರ್ಶನ ಸೇರಿ ಹಲವು ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು. ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿದ ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ. ಹುಬ್ಬಳ್ಳಿಯಲ್ಲಿಯೇ ಎಂಬಿಬಿಎಸ್ ಪೂರೈಸಿರುವ ಡಾ.ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನಲ್ಲಿ ಎಮ್.ಡಿ. ಅಧ್ಯಯನ ನಡೆಸುತ್ತಿದ್ದಾರೆ.
ಈಕೆ ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡೀವ್ಸ್, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾಳೆ. ಕೆಲವು ಧಾರವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್ ನಲ್ಲಿ ನಟಿಸಿದ್ದಾಳೆ.




