ಕಿಲಾಡಿ ಕಳ್ಳನ ಬಂಧನ? RX ಪ್ರೇಮಿಗಳೇ ಹುಷಾರ್!

ಯಮಹಾ RX100 ಬೈಕ್‌ಗಳ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಬೈರಿದೇವರಕೊಪ್ಪ ನಿವಾಸಿ ಪ್ರಕಾಶ ಪರಸನ್ನವರನ್ನು ಬಂಧಿಸಲಾಗಿದೆ.

ಆರೋಪಿ ಹುಬ್ಬಳ್ಳಿ ನಗರದ ವಿದ್ಯಾನಗರ, ಕೇಶ್ವಾಪುರ, ನವನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ದಾಂಡೇಲಿಯಲ್ಲೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ₹9 ಲಕ್ಷ ಮೌಲ್ಯದ 7 ಯಮಹಾ RX100 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿದ್ಯಾನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಾಕ್ಸನ್ ಡಿ’ಸೋಜಾ ನೇತೃತ್ವದಲ್ಲಿ ಕ್ರೈಂ ಸಿಬ್ಬಂದಿಗಳ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಪ್ರಕರಣ ಭೇದಿಸಿದ ಪೊಲೀಸ್ ತಂಡದ ಕಾರ್ಯಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About The Author