Monday, March 24, 2025

Latest Posts

ಕರ್ನಾಟಕ ಬಂದ್ ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ: ಸಹಜ ಸ್ಥಿತಿಯಲ್ಲಿ ವಾಣಿಜ್ಯನಗರ

- Advertisement -

Hubli News: ಹುಬ್ಬಳ್ಳಿ: ಕನ್ನಡಪರ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅವಳಿನಗರದ ಜನರಿಗೆ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಈ ನಿಟ್ಟಿನಲ್ಲಿ ವಾಹನ ಸಂಚಾರ, ಜನರ ಓಡಾಟ ಹಾಗೂ ಆಟೋ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ.

ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿಯೇ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕರ್ನಾಟಕ ಬಂದ್ ಗೆ ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿಲ್ಲ. ಅಲ್ಲದೇ ಹುಬ್ಬಳ್ಳಿ ಧಾರವಾಡ ಆಟೋ ಚಾಲಕರು ಬಂದ್ ಗೆ ಬೆಂಬಲ ನೀಡಿದೇ ದೈನಂದಿನ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಇನ್ನೂ ಅಂಗಡಿ, ಮುಂಗಟ್ಟುಗಳು ಎಂದಿನಂತೆ ಓಪನ್ ಆಗಿದ್ದು, ಸಹಜ ಸ್ಥಿತಿಯಲ್ಲಿ ವ್ಯಾಪಾರ ವಹಿವಾಟು ಮುಂದುವರೆದಿದ್ದು, ಹುಬ್ಬಳ್ಳಿಯಲ್ಲಿ ಬಂದ್ ಗೆ ಬೆಂಬಲ ಇಲ್ಲದಂತಾಗಿದೆ.

ಇನ್ನೊಂದೆಡೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದವು. ವಿವಿಧ ಕನ್ನಡಪರ ಸಂಘಟನೆಗಳು, ಮರಾಠಿ ಪುಂಡರ ವಿರುದ್ಧ ಘೋಷಣೆ ಕೂಡ ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೇ, ಬೆಳಗಾವಿಯಲ್ಲಿ ಎಂಇಎಸ್ ಪುಂಡರನ್ನ ಗಡಿಪಾರು ಮಾಡಬೇಕೆಂದು ಆಗ್ರಹಿಸಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಹೆಚ್.ಡಿ. ಕುಮಾರಸ್ವಾಮಿ ಮತ್ತು ಸಂಸದರ ವಿರುದ್ಧ ಘೋಷಣೆ ಕೂಗಿದರು. ಕೊನೆಗೆ ಎಂಇಎಸ್ ಪುಂಡರ ಪ್ರತಿಕೃತಿ ಕೈಯಲ್ಲಿ ಹಿಡಿದು ಪ್ರತಿಭಟನೆ ಮಾಡಿದ್ದಾರೆ.

- Advertisement -

Latest Posts

Don't Miss