ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ. ಇದಕ್ಕೆ ಸಾಕ್ಷಿ ಎಂಬುವಂತೇ ಹುಬ್ಬಳ್ಳಿಯಿಂದ ಬೆಂಗಳೂರು, ಚೆನೈ, ಹೈದರಬಾದ್ ಸೇರಿ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್‌ನಿಲ್ದಾಣದ ಕಟ್ಟಡ ಚಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ ಗೃಹದ ಗೋಡೆಗಳು ಮಳೆಗೆ ತೇವವಾಗಿದ್ದು, ನೆಮ್ಮದಿಯ ನಿದ್ದೆಗೂ ಅವರು ಪರದಾಡುವಂತಾಗಿದೆ.
ಹೌದು.. ಶಿಥಿಲಗೊಂಡಿರುವ ಚಾವಣಿಯಿಂದ ಮಳೆ ನೀರು ಸೋರುತ್ತಿದ್ದು, ಪ್ರಯಾಣಿಕರು ಕೊಡೆಗಳನ್ನು ಹಿಡಿದು ಆಸನದಲ್ಲಿ ಕೂರುತ್ತಾರೆ. ಚಾವಣಿ ಮೇಲೆ ನೀರು ನಿಂತು ಪುಟ್ಟ ಕೆರೆಯಂತಾಗಿದೆ. ನಿಲ್ದಾಣದಲ್ಲಿನ 15 ಪ್ಲಾಟ್‌ಫಾರ್ಮ್‌ಗಳು ಸೋರುತ್ತಿದ್ದು, 12ನೇ ಪ್ಲಾಟ್‌ಫಾರ್ಮ್ ಸಂಪೂರ್ಣ ಜಲಾವೃತವಾಗಿದೆ.
ಪ್ರವೇಶ ದ್ವಾರದ ಬಲಭಾಗದಲ್ಲಿ ಟೆಂಡರ್ ಪಡೆದಿರುವ ಎರಡು ಅಂಗಡಿಗಳಿದ್ದು, ಸೋರುವ ಮಳೆನೀರಿನಿಂದ ರಕ್ಷಿಸಿಕೊಳ್ಳಲು, ಮುಂಭಾಗಕ್ಕೆ ಚಾವಣೆ ಹಾಕಿಕೊಂಡಿದ್ದಾರೆ. ಪ್ರಯಾಣಿಕರು ಸೂಟ್‌ಕೇಸ್, ಬ್ಯಾಗುಗಳನ್ನು ಹೊತ್ತುಕೊಂಡು ಆಯಾ ಪ್ಲಾಟ್‌ಫಾರ್ಮ್‌ಗಳಿಗೆ ನೀರಿನಲ್ಲೇ ದಾಟಿಕೊಂಡು ಹೋಗಬೇಕಾಗಿದ್ದು, ಮಳೆ ನೀರು ಸೋರದಂತೆ ನಿಯಂತ್ರಿಸಲು, ಕಟ್ಟಡದ ಕೆಲ ಕಡೆ ಭೀಮ್‌ಗಳಿಗೆ ತಗಡು ಹಾಕಲಾಗಿದೆ. ಸಿಬ್ಬಂದಿ ವಿಶ್ರಾಂತಿಗೃಹದ ಗೋಡೆಗಳು ತೇವಗೊಂಡಿದ್ದು, ಒಂದು ಭಾಗವನ್ನು ಈಚೆಗಷ್ಟೇ ಸರಿಪಡಿಸಿ ಪ್ಲಾಸ್ಟರ್ ಮಾಡಲಾಗಿದೆ. ಆದರೆ, ಪೂರ್ಣಪ್ರಮಾಣದ ಸುವ್ಯವಸ್ಥೆ ಮಾಡಲಾಗಿಲ್ಲ.
ಸರ್ಕಾರದ ಕಟ್ಟಡದ ಬಾಳಿಕೆ ಅವಧಿ ಕನಿಷ್ಠ 60 ವರ್ಷ. 2000ನೇ ಇಸವಿಯಲ್ಲಿ ಬಸ್ ನಿಲ್ದಾಣ ಉದ್ಘಾಟನೆಯಾಗಿದೆ. ಅನುದಾನ ಕೊರತೆಯಿಂದ ಬಸ್ ನಿಲ್ದಾಣ ನಿರ್ವಹಣೆ ಕಷ್ಟವಾಗಿದೆ. ಪೈಪ್‌ಗಳಲ್ಲಿ ಕಸ ತುಂಬಿದ್ದು, ಮಳೆ ನೀರು ಹರಿಯುವುದಿಲ್ಲ. ಅದಕ್ಕೆ ಚಾವಣಿ ಮೇಲೆ ನೀರು ಹರಿಯದೇ ಸೋರುತ್ತದೆ. ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಾಯವ್ಯ ಸಾರಿಗೆ ಸಂಸ್ಥೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮಾಹಿತಿ ನೀಡಿದ್ದಾರೆ.
MB Pateel : ಮಮದಾಪುರಕೆರೆ ವ್ಯಾಪ್ತಿಯಲ್ಲಿ ಸುಮಾರು 56,000 ಗಿಡಗಳು ಅರಳುತ್ತಿವೆ..!
Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ