Hubli: ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಮುಂದಿನ ಚುನಾವಣೆಗೆ ಬಿಜೆಪಿಗೆ ಬರಲಿದ್ದಾರೆ: ಮುರುಗೇಶ್ ನಿರಾಣಿ

Hubli Political News: ಕಾಂಗ್ರೆಸ್‌ನ ಅನೇಕ ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷರ ಸಂಪರ್ಕದಲ್ಲಿ 25 ಶಾಸಕರಿದ್ದರೆ, ನನ್ನ ಸಂಪರ್ಕದಲ್ಲಿ ಎಂಟು ಶಾಸಕರಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಅವರು ಬಿಜೆಪಿಗೆ ಬರಲು ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನು, ವಿಜಯೇಂದ್ರ ಹಾಗೂ ಯತ್ನಾಳ್ ಭೇಟಿಯ ವಿಚಾರವಾಗಿ ಪ್ರತಿಕ್ರಿಯಿಸಿರುವ ನಿರಾಣಿ, ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ. ಅಸಮಾಧಾನಿತರು ಮರಳಿ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಮಾಜಿ ಸಚಿವ ಮುರುಗೇಶ ನಿರಾಣಿ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಅನೇಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಮುಂದಿನ ಚುನಾವಣೆ ಸಮಯದಲ್ಲಿ ಬಿಜೆಪಿಗೆ ಬರಲು ಅವರು ಸಂಪರ್ಕದಲ್ಲಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷರ ಸಂಪರ್ಕದಲ್ಲಿ 25 ಶಾಸಕರಿದ್ದರೆ, ನನ್ನ ಸಂಪರ್ಕದಲ್ಲಿ ಎಂಟು ಶಾಸಕರಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ವಿಜಯೇಂದ್ರ–ಯತ್ನಾಳ್ ಭೇಟಿ ವಿಚಾರ: ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಒಂದೇ ಡೈನಿಂಗ್ ಟೇಬಲ್‌ನಲ್ಲಿ ಕಾಣಿಸಿಕೊಂಡಿರುವ ಫೋಟೋ ವಿಚಾರವಾಗಿ ಪ್ರತಿಕ್ರಿಯಿಸಿದ ಮುರುಗೇಶ ನಿರಾಣಿ, ಇಬ್ಬರು ನಾಯಕರ ಭೇಟಿಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಯತ್ನಾಳ್ ಈ ಹಿಂದೆ ನಮ್ಮ ಪಕ್ಷದಲ್ಲಿಯೇ ಇದ್ದವರು. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ. ಯತ್ನಾಳ್ ಅವರು ಮರಳಿ ಪಕ್ಷಕ್ಕೆ ಬರಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಯತ್ನಾಳ್ ಮಾತ್ರವಲ್ಲದೆ, ಪಕ್ಷದಲ್ಲಿ ಅಸಮಾಧಾನ ಹೊಂದಿರುವವರೂ ಮರಳಿ ಬರಬೇಕು. ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.

ಅಸಮಾಧಾನಿತ ನಾಯಕರು ಮತ್ತೆ ಬಿಜೆಪಿಗೆ ಬಂದರೆ ಸ್ವಾಗತವಿದೆ ಎಂದು ಮುರುಗೇಶ ನಿರಾಣಿ ಸ್ಪಷ್ಟಪಡಿಸಿದರು.

ಒಟ್ಟಾರೆ, ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ನಿರಾಣಿ ಅವರ ಹೇಳಿಕೆ ಹಾಗೂ ಅಸಮಾಧಾನಿತ ಬಿಜೆಪಿ ನಾಯಕರು ಮರಳಿ ಬರಬೇಕು ಎಂಬ ಅವರ ಆಹ್ವಾನ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

About The Author