Hubli News: ಹುಬ್ಬಳ್ಳಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರಲಾಗುತ್ತಿದೆ. ಷಡ್ಯಂತ್ರ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದು, ಎಸ್.ಐ.ಟಿ ತನಿಖೆಯ ವರದಿಯನ್ನು ಸಲ್ಲಿಸಬೇಕು. ಅಲ್ಲದೆ ಷಡ್ಯಂತ್ರ ಮಾಡಿದವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿ ಘೋಷಣೆ ಕೂಗಿ ಹುಬ್ಬಳ್ಳಿಯ ಕಮರಿಪೇಟೆಯಿಂದ ಹುಬ್ಬಳ್ಳಿಯ ತಹಶಿಲ್ದಾರರ ಕಚೇರಿವರಗೆ ಬೃಹತ್ ಪ್ರತಿಭಟನಾ ರ್ಯಾಲಿ ಮೂಲಕ ಆಗ್ರಹಿಸಲಾಯಿತು.
ಷಡ್ಯಂತ್ರ ಮಾಡುವವರನ್ನು ಸಂಹಾರ ಮಾಡುವೆವು, ಆರೋಪ ಮಾಡಿ ಅಪಪ್ರಚಾರ ಮಾಡವವರನ್ನು ಭಯಲಿಗೆ ಎಳೆಯುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಧರ್ಮಸ್ಥಳದ ಧರ್ಮಯುದ್ಧಕ್ಕೆ ಸಿದ್ಧ ಎಂದು ಘೋಷಣೆ ಕೂಗಿದರು.