Hubli Crime News: ಗೋಕುಲಧಾಮ ಖಾಲಿ ಜಾಗದಲ್ಲಿ ಶವ ಪತ್ತೆ; ಕೊ*ಲೆ ಶಂಕೆ

Hubli Crime News: ಹುಬ್ಬಳ್ಳಿಯಲ್ಲಿ ಕಸ ಕಂಟಿಗಳಿಂದ ಆವರಿಸಿಕೊಂಡಿದ್ದ ಖಾಲಿ ಜಾಗದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಈ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೋಕುಲಧಾಮ ಪ್ರದೇಶದ ಖಾಲಿ ಜಾಗದಲ್ಲಿ ಇಂದು ಬೆಳಗ್ಗೆ ಸ್ಥಳೀಯರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಹಳೇ ಹುಬ್ಬಳ್ಳಿ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು ಕೊಲೆ ಮಾಡಿ ಶವವನ್ನು ಎಸೆದಿರುವ ಸಾಧ್ಯತೆ ಇದೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.

ಘಟನೆ ಕುರಿತು ಹೆಚ್ಚಿನ ವಿವರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದು, ಶವದ ಗುರುತು ಪತ್ತೆ ಕಾರ್ಯವೂ ಮುಂದುವರಿದಿದೆ.

About The Author