Thursday, April 17, 2025

Latest Posts

Railway station: ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್: ಶ್ವಾನದಳದಿಂದ ತಪಾಸಣೆ…!

- Advertisement -

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ವಿಶ್ವದ ಅತಿದೊಡ್ಡ ಪ್ಲಾಟ್ ಫಾರಂ ಹೊಂದಿರುವ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ.

ಹೌದು.. ರಾಜ್ಯ ರಾಜಧಾನಿಯಲ್ಲಿ ಐವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದು, ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸುವ ಮೂಲಕ ಹೈ ಅಲರ್ಟ್ ಘೋಷಣೆ ಮಾಡಿದೆ. ಈಗಾಗಲೇ ಶ್ವಾನದಳದಿಂದ ಪ್ರಯಾಣಿಕರ ಬ್ಯಾಗ್ ಹಾಗೂ ಇತರೆ ವಸ್ತುಗಳನ್ನು ಪರಿಶೀಲನೆ ಮಾಡುವ ಮೂಲಕ ಮುಂಜಾಗ್ರತಾ ಕ್ರಮಗಳನ್ನು ಜರುಗಿಸಲಾಯಿತು.

ಇನ್ನೂ ಕಳೆದ ಕೆಲವು ವರ್ಷಗಳ ಹಿಂದೆಯಷ್ಟೇ ಹುಬ್ಬಳ್ಳಿಯಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಬೆನ್ನಲ್ಲೇ ತಪಾಸಣೆ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಹುಬ್ಬಳ್ಳಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಯಿತು.

- Advertisement -

Latest Posts

Don't Miss