Hubli: ಇಷ್ಟು ದಿನ ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಭೀಕರ ಮರ್ಡರ್ ನಡೆದಿದೆ.. ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ..
ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿ..
ನಡು ರಸ್ತೆಯಲ್ಲೇ ಅಡ್ಡಗಟ್ಟಿದ ಇಬ್ಬರು..
ಕೈಯಲ್ಲಿ ಮಚ್ಚು.. ಏಕಾಏಕಿ ದಾಳಿ..
ಹೀಗೆ ಸಿನಿಮೀಯ ರೀತಿಯಲ್ಲಿ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ..
ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದೆ.. ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ ಇಬ್ಬರು ವ್ಯಕ್ತಿಗಳು ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದಾರೆ.. ದಾಳಿಯ ತೀವ್ರತೆಗೆ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಕೃತ್ಯ ಎಸಗಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ..
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.. ಘಟನಾ ಸ್ಥಳದಿಂದ ಅಗತ್ಯ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.. ಸದ್ಯ ಹತ್ಯೆಯಾದ ವ್ಯಕ್ತಿಯ ಗುರುತು ಹಾಗೂ ಕೊಲೆಗೆ ನಿಖರ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ..
ಇಷ್ಟು ದಿನ ಶಾಂತವಾಗಿದ್ದ ವಾಣಿಜ್ಯ ನಗರಿಯಲ್ಲಿ ನಡು ರಸ್ತೆಯಲ್ಲೇ ನಡೆದ ಈ ಭೀಕರ ಹತ್ಯೆ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.. ಹತ್ಯೆಯಾದವರು ಯಾರು? ಕೊಲೆಗೆ ಕಾರಣವೇನು? ಆರೋಪಿಗಳು ಯಾರು? ಎಂಬ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ.. ಸದ್ಯ ಆರೋಪಿಗಳ ಪತ್ತೆಗೆ ವಿದ್ಯಾನಗರ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ..

