Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ – ವಿದ್ಯಾರ್ಥಿಗಳ ಸಂತಸ

Hubli News: ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ನೂತನ ಘೋಷಣೆ ರಾಜ್ಯದ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ. ಸಾರಿಗೆ ವೆಚ್ಚದ ಭಾರ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಏನು ಹೇಳುತ್ತಾರೆ ನೋಡೋಣ.

ಪ್ರತಿದಿನ ಶಾಲೆ ಹಾಗೂ ಕಾಲೇಜುಗಳಿಗೆ ಬಸ್ ಮೂಲಕ ಸಂಚರಿಸುವ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ದೊಡ್ಡ ನೆರವಾಗಲಿದೆ. ಪೋಷಕರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಘೋಷಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಶೇಷವಾಗಿ ಪ್ರತಿದಿನ ದೂರದ ಊರುಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಬರುವ ವಿದ್ಯಾರ್ಥಿಗಳು ಈ ನಿರ್ಧಾರವನ್ನು ಸ್ವಾಗತಿಸಿದ್ದು, ಸಾರಿಗೆ ವೆಚ್ಚ ಉಳಿದು ಶಿಕ್ಷಣದ ಮೇಲೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲೂ ವಿದ್ಯಾರ್ಥಿಗಳಿಂದ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಒಟ್ಟಾರೆ ಉಚಿತ ಬಸ್ ಪಾಸ್ ಯೋಜನೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಜೊತೆಗೆ ಪೋಷಕರ ಆರ್ಥಿಕ ಹೊರೆ ಕಡಿಮೆ ಮಾಡುವ ನಿರೀಕ್ಷೆ ಮೂಡಿಸಿದೆ. ಸರ್ಕಾರ ಶೀಘ್ರವೇ ಯೋಜನೆಯನ್ನು ಜಾರಿಗೆ ತರಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.

ಕ್ಯಾಮೆರ ಪರ್ಸನ್ ಹೇಮಂತ್ ಜೊತೆ ಸಂಗಮೇಶ ಸತ್ತಿಗೇರಿ ಕರ್ನಾಟಕ ಟಿವಿ ಹುಬ್ಬಳ್ಳಿ.

About The Author