- Advertisement -
Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಬಳಿ ತಡರಾತ್ರಿ ನಡೆದಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಆಟೋ ಚಾಲಕ ಸೋಮಶೇಖರ್ ಎಂಬುವವರ ಮೇಲೆ ರೋಹಿತ ಎಂಬಾತ ಚಾಕು ಇರಿದಿದ್ದಾನೆ ಎಂದು ಸ್ವತಃ ಹಲ್ಲೆಗೊಳಗಾದ ವ್ಯಕ್ತಿಯೇ ದೂರು ನೀಡಿದ್ದು, ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಕ್ಷುಲ್ಲಕ ಕಾರಣಗಳಿಗೆ, ಹಳೆಯ ದ್ವೇಷಗಳಿಗೆ ಚಾಕು ಇರಿತ ಪ್ರಕರಣ ಹೆಚ್ಚಾಗುತ್ತಿದ್ದು, ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸೂಕ್ತ ಕ್ರಮಗಳನ್ನು ಜರುಗಿಸುವ ಕಾರ್ಯವನ್ನು ಮಾಡಬೇಕಿದೆ.
- Advertisement -