- Advertisement -
Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್ ಜಾರಿ ಮಾಡಿ ಕೋರ್ಟ್ ಆದೇಶದ ಮೇರೆಗೆ 25,000 ದಂಡ ವಸೂಲಿ ಮಾಡಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಹತ್ತಿರ ವ್ಹೀಲಿಂಗ್ ಮಾಡಿದ್ದ ವಾಹನವನ್ನು ಸೀಜ್ ಮಾಡಲಾಗಿದ್ದು, ಬೈಕ್ ಸವಾರ ಅಪ್ರಾಪ್ತ ವಯಸ್ಸಿನವನಾದ ಕಾರಣ ಆತನ ಪೋಷಕರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನ್ಯಾಯಾಲಯವು ಪೋಷಕರಿಗೆ 25,000 ರೂ. ದಂಡ ವಿಧಿಸಿರುತ್ತದೆ.
ಇನ್ನೂ ಹುಬ್ಬಳ್ಳಿಯ ಬಹುತೇಕ ಕಡೆಯಲ್ಲಿ ಬೈಕ್ ವೀಲಿಂಗ್ ಮಾಡುವುದು ಸರ್ವೇಸಾಮಾನ್ಯವಾಗಿದ್ದು, ಈ ಬಗ್ಗೆ ಪೊಲೀಸ್ ಕಮಿಷನರೇಟ್ ಶಿಸ್ತು ಕ್ರಮಗಳನ್ನು ಜರುಗಿಸಬೇಕಿದೆ. ಅಲ್ಲದೇ ಅಪ್ರಾಪ್ತರ ಕೈಯಲ್ಲಿ ವಾಹನ ಕೊಡುವ ಪಾಲಕರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕಿದೆ.
- Advertisement -