Hubli News: ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಿದ್ದರು. ಆದರೆ ಮುಷ್ಕರದಲ್ಲಿ ಭಾಗಿಯಾದ ಸಾರಿಗೆ ಸಿಬ್ಬಂದಿಗಳಿಗೆ ಬಿಸಿ ಮುಟ್ಟಿಸಲು ವಾಯುವ್ಯ ಸಾರಿಗೆ ಸಂಸ್ಥೆ ಮುಂದಾಗಿದೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬರೋಬ್ಬರಿ 3 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, 2787 ಚಾಲಕ, ನಿರ್ವಾಹಕರಿಗೆ, 420 ಮೆಕಾನಿಕ್, 78 ಆಡಳಿತ ಸಿಬ್ಬಂದಿಗಳಿಗೆ ನೋಟಿಸ್ ನೀಡಿದೆ. NWKRTC ವ್ಯಾಪ್ತಿಯ 7 ಜಿಲ್ಲೆಯ 11 ವಿಭಾಗದ ಸಿಬ್ಬಂದಿಗಳಿಗೆ ನೋಟಿಸ್ ನೀಡಿದ್ದು, ಕರ್ತವ್ಯಕ್ಕೆ ಹಾಜರಾಗದೇ, ಮುಷ್ಕರದಲ್ಲಿ ಭಾಗಿಯಾದ ಸಿಬ್ಬಂದಿಗಳಿಗೆ ಈಗಾಗಲೇ ನೋಟಿಸ್ ನೀಡಿದೆ. ಜೊತೆಗೆ ಮುಷ್ಕರದ ಹೊಡೆತಕ್ಕೆ ನಲುಗಿದ NWKRTC, ಒಂದೇ ದಿನಕ್ಕೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 2 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ.
ಇನ್ನೂ ಪ್ರತಿದಿನ ರಸ್ತೆಗಿಳಿಯಲಿವೆ NWKRTC ಸಂಸ್ಥೆಯ 4900 ಬಸ್‌ಗಳು, ಮುಷ್ಕರ ದಿನ ಸಿಬ್ಬಂದಿಗಳಿಲ್ಲದ ಕಾರಣ ರಸ್ತೆಗಿಳಿಯಲಿಲ್ಲ ಸಾವಿರಕ್ಕೂ ಹೆಚ್ಚು ಬಸ್‌ಗಳು. ಹೀಗಾಗಿ ಒಂದೇ ದಿನ ಕೋಟ್ಯಂತರ ರೂಪಾಯಿ ನಷ್ಟವನ್ನ ಅನುಭವಿಸಿದೆ.
ಸಂಗಮೇಶ ಸತ್ತಿಗೇರಿ ಕರ್ನಾಟಕ ಟಿವಿ ಹುಬ್ಬಳ್ಳಿ