Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು ಡಿಕ್ಕಿಯಲ್ಲಿ ತುಂಬಿಕೊಂಡು ಕಳ್ಳರು ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಈ ಪ್ರಕರಣದ ಹಿನ್ನೆಲೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಜಾನುವಾರು ಕಳ್ಳರ ಹಾವಳಿಯಿಂದ ಸ್ಥಳೀಯರು ಆತಂಕಗೊಂಡಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಸದ್ಯ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿಯವರು ಜಾನುವಾರು ಕಳ್ಳರ ಹಾವಳಿ ಹಿನ್ನೆಲೆಯಲ್ಲಿ ಸಿಸಿಟಿವಿ ವಿಡಿಯೋ ಹಾಗೂ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.




