Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತವಾಗಿ ಬಿಜೆಪಿ ಸಾಕಷ್ಟು ಸಂಭ್ರಮಾಚರಣೆ ಮಾಡುತ್ತಿದೆ. ಆದರೆ ಹುಬ್ಬಳ್ಳಿ ಧಾರವಾಡ ಯುಥ್ ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡಿದೆ.
ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬೇಕೆ ಬೇಕು ಜಾಬ್ ಬೇಕು ಎಂದು ಘೋಷಣೆ ಕೂಗುವ ಮೂಲಕ ಮೋದಿಯವರ ಜನ್ಮದಿನ ದೇಶಕ್ಕೆ ನಿರುದ್ಯೋಗದ ದಿನ ಎಂದು ಪ್ರತಿಭಟನೆ ನಿರತ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರದ ಚುಕ್ಕಾಣಿ ಹಿಡಿಯುವ ಮುನ್ನ ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಕಷ್ಟು ಭರವಸೆ ನೀಡಿದ್ದರು. ಉದ್ಯೋಗ ಸೃಷ್ಟಿಸಿ ಕೋಟ್ಯಾಂತರ ಜನರಿಗೆ ಉದ್ಯೋಗ ಕೊಡಿಸುವ ಆಸೆ ತೋರಿದ್ದರು. ಆದರೆ ಇಂದಿಗೂ ಯಾವುದೇ ಬೇಡಿಕೆ ಮಾತ್ರ ಈಡೇರಿಲ್ಲ. ಯುವ ಸಮುದಾಯ ಕೆಲಸವಿಲ್ಲದೇ ಕಂಗಾಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.




