Hubli News: ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ಮಾಡಿದ್ದು, ಹುಬ್ಬಳ್ಳಿಯ ಶಿಮ್ಲಾ ನಗರದಲ್ಲಿ ಈ ಘಟನೆ ನಡೆದಿದೆ.

ರಸ್ತೆಯಲ್ಲಿ ಹೊರಟಿದ್ದ ಬಾಲಕಿ ಮೇಲೆ ಏಕಾಏಕಿ ಬೀದಿ ನಾಯಿಗಳಿಂದ ದಾಳಿ ನಡೆದಿದ್ದು, ಎರಡು ಬೀದಿ ನಾಯಿಗಳಿಂದ ಬಾಲಕಿ ಮೇಲೆ ಏಕ ಕಾಲಕ್ಕೆ ದಾಳಿ ನಡೆದಿದೆ. ಬಾಲಕಿ ಚೀರಾಡಿದರೂ ನಾಯಿಗಳು ಆಕೆಯನ್ನು ಹಿಡಿದು ಕಚ್ಚಾಡಿದ್ದು, ಬಾಲಕಿ ಜೋರಾಗಿ ಕಿರುಚಿದಾಗ ಓಡಿ ಹೋಗಿದೆ.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೀದಿನಾಯಿಗಳಿಗೆ ಕಡಿವಾಣ ಹಾಕುವಂತೆ ಜನ ಆಗ್ರಹಿಸಿದ್ದಾರೆ. ಆದರೂ ಕೂಡ ಹು-ಧಾ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ತೋರುತ್ತಿದ್ದು, ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ.

About The Author