Hubli News: ಹುಬ್ಬಳ್ಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳು ಎದ್ದಿವೆ. ಪೊಲೀಸ್ ಠಾಣೆಯಲ್ಲಿಯೇ ಪೊಲೀಸರ ಎದುರೇ ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಹಾಡಹಗಲೇ ಲಾಂಗ್, ಮಚ್ಚುಗಳು ಚಳಪಳಿಸಿವೆ ಎನ್ನಲಾಗಿದ್ದು, ಎರಡು ಕುಟುಂಬಗಳ ನಡುವಿನ ವೈಷಮ್ಯ ಗ್ಯಾಂಗ್ ವಾರ್ ಸ್ವರೂಪ ಪಡೆದುಕೊಂಡಿದೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಅಷ್ಟಕ್ಕೂ ನಡೆದಿದ್ದೇನು? ಪೊಲೀಸರ ಮುಂದೆಯೇ ಏನಾಯಿತು? ಇಲ್ಲಿದೆ ವರದಿ.
ಹುಬ್ಬಳ್ಳಿ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಗಲಾಟೆಯ ಸದ್ದು ಕೇಳಿಬಂದಿದೆ. ರೌಡಿಶೀಟರ್ ಶ್ಯಾಮ್ ಜಾಧವ್ ಕುಟುಂಬ ಹಾಗೂ ಸೆಟ್ಲ್ಮೆಂಟ್ ನಿವಾಸಿ ಬಸವರಾಜ್ ಜಾಧವ್ ಕುಟುಂಬದ ನಡುವೆ ವೈಷಮ್ಯ ತಾರಕಕ್ಕೇರಿದೆ ಎನ್ನಲಾಗಿದೆ.
ಎರಡು ಕುಟುಂಬಗಳ ನಡುವಿನ ಗಲಾಟೆ ಇದೀಗ ಗ್ಯಾಂಗ್ ವಾರ್ ಸ್ವರೂಪ ಪಡೆದುಕೊಂಡಿದೆ ಎಂಬ ಆರೋಪ ಕೇಳಿಬಂದಿದೆ. ಹಾಡಹಗಲೇ ಲಾಂಗ್, ಮಚ್ಚುಗಳು ಪ್ರದರ್ಶನಗೊಂಡಿದ್ದು, ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ.
ಇನ್ನೂ ಗಂಭೀರ ವಿಚಾರವೆಂದರೆ, ಪೊಲೀಸ್ ಠಾಣೆಯಲ್ಲಿಯೇ ಪೊಲೀಸರ ಎದುರು ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ. ಕಾನೂನು ರಕ್ಷಣೆ ನೀಡಬೇಕಾದ ಪೊಲೀಸ್ ಠಾಣೆಯಲ್ಲೇ ಇಂತಹ ಘಟನೆ ನಡೆದಿದೆ ಎನ್ನಲಾಗಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಕಣ್ಣಮುಚ್ಚಿ ಕುಳಿತಿದೆಯೇ? ಎರಡು ಕುಟುಂಬಗಳ ನಡುವಿನ ವೈಷಮ್ಯಕ್ಕೆ ಕಡಿವಾಣ ಹಾಕುವಲ್ಲಿ ಪೊಲೀಸರು ವಿಫಲರಾಗಿದ್ದಾರೆಯೇ? ಎಂಬ ಪ್ರಶ್ನೆಗಳು ಸ್ಥಳೀಯರಿಂದ ಕೇಳಿಬರುತ್ತಿವೆ.
ಒಟ್ಟಿನಲ್ಲಿ, ಎರಡು ಕುಟುಂಬಗಳ ನಡುವಿನ ವೈಷಮ್ಯದಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹಾಡಹಗಲೇ ಮಾರಕಾಸ್ತ್ರಗಳ ಪ್ರದರ್ಶನ ಹಾಗೂ ಪೊಲೀಸ್ ಠಾಣೆಯಲ್ಲಿಯೇ ಜೀವ ಬೆದರಿಕೆ ಹಾಕಿದ ಆರೋಪದ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಗಮನಹರಿಸಬೇಕಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಿದೆ.
ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರ ಮುಂದೆಯೇ ಇಂತಹ ಘಟನೆ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ? ಎರಡು ಕುಟುಂಬಗಳ ನಡುವಿನ ಸಂಘರ್ಷಕ್ಕೆ ಕಡಿವಾಣ ಹಾಕಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಕ್ಯಾಮೆರ ಪರ್ಸನ ಹೇಮಂತ್ ಜೋತೆ ಸಂಗಮೇಶ ಸತ್ತಿಗೇರಿ ಕರ್ನಾಟಕ ಟಿವಿ ಹುಬ್ಬಳ್ಳಿ




