Hubli News: ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ಹಾಕಬೇಡಿ; ರೈತರ ಮನವಿ

Hubli News: ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದರು. ಕೃಷಿ ಚಟುವಟಿಕೆಗಳಿಗೆ ಬಳಸುವ ಟ್ರ್ಯಾಕ್ಟರ್‌ಗಳಿಗೆ ಅನಗತ್ಯ ದಂಡ ವಿಧಿಸಲಾಗುತ್ತಿದೆ ಎಂದು ರೈತರು ಆರೋಪಿಸಿದರು.

ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು ಹುಬ್ಬಳ್ಳಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದರು. ರೈತ ಭಾರತ ರೈತ ಸಮಾಜದ ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಆರ್‌ಟಿಒ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಗಮನಕ್ಕೆ ಸಮಸ್ಯೆಯನ್ನು ತಂದರು.

ಕೃಷಿ ಚಟುವಟಿಕೆಗಳಿಗೆ ಬಳಸುವ ಟ್ರ್ಯಾಕ್ಟರ್‌ಗಳನ್ನು ವಿವಿಧ ಕಾರಣಗಳನ್ನು ಮುಂದಿಟ್ಟು ತಪಾಸಣೆ ನಡೆಸಿ ದಂಡ ವಿಧಿಸಲಾಗುತ್ತಿದೆ. ಇದರಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ ಮತ್ತಷ್ಟು ಆರ್ಥಿಕ ಹೊರೆ ಉಂಟಾಗುತ್ತಿದೆ ಎಂದು ಮುಖಂಡರು ದೂರಿದರು.

ಟ್ರ್ಯಾಕ್ಟರ್‌ಗಳನ್ನು ಕೇವಲ ವಾಣಿಜ್ಯ ವಾಹನಗಳ ರೀತಿಯಲ್ಲಿ ಪರಿಗಣಿಸದೇ, ಕೃಷಿ ಉದ್ದೇಶಕ್ಕಾಗಿ ಬಳಸುವ ವಾಹನಗಳೆಂದು ಪರಿಗಣಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ಕಾರ ರೈತರ ಪರವಾದ ನೀತಿಗಳನ್ನು ಜಾರಿಗೆ ತರುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ತೊಂದರೆಯಾಗುವಂತಹ ಕ್ರಮಗಳು ನಡೆಯಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಹಲವಾರು ರೈತರು ಉಪಸ್ಥಿತರಿದ್ದರು.

About The Author