Hubli News: ಸಿಎಂ ಆದ ಡಿಕೆ: ಬಣ್ಣ ಹಚ್ಚಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳು

Political News: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಬೃಹತ್ ಎಲ್ಇಡಿ ವಾಲ್ ಅಳವಡಿಸಿ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಸಂಭ್ರಮಾಚರಣೆ ನಡೆಸಿದರು.

ನಗರದಲ್ಲಿ ಬೃಹತ್ ಎಲ್ಇಡಿ ವಾಲ್ ಅಳವಡಿಸಿ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಿದ ಕಾರ್ಯಕರ್ತರು ಹೊಸ ನಾಯಕತ್ವವನ್ನು ಸ್ವಾಗತಿಸಿದರು.

ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಅಲ್ಲದೆ ಹೊಸ ಸರ್ಕಾರಕ್ಕೆ ಶುಭ ಹಾರೈಸಿದರು.

ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದಲ್ಲಿ ಬೆಳೆದು ಬಂದ ನಾಯಕ ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ರಾಜ್ಯಕ್ಕೆ ಸಮರ್ಥ ನಾಯಕತ್ವ ದೊರೆತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ಕಾರ್ಯಕರ್ತರು ವ್ಯಕ್ತಪಡಿಸಿದ್ದು, ಪದಗ್ರಹಣ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣದಲ್ಲಿ ಆಚರಿಸಿದರು.

About The Author