Hubli News: ಜಿಲ್ಲೆಯಲ್ಲಿ ಎರಡು ಕಡೆ ರೈತರ ಪ್ರತಿಭಟನೆ: ಶಾಂತಿ ಕಾಪಾಡಲು ಕಮಿಷನರ್ ಮನವಿ

Hubli News: ಕೇಂದ್ರ ಸರ್ಕಾರದೊಂದಿಗೆ ನಡೆದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ರಸ್ತೆ ತಡೆಗೆ ಮುಂದಾಗಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಹಾಗೂ ಯರಿಕೊಪ್ಪದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಪ್ರತಿಭಟನಾಕಾರರು ಶಾಂತಿ ಕಾಪಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಮನವಿ ಮಾಡಿದ್ದಾರೆ.

ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಹಾಗೂ ಯರಿಕೊಪ್ಪದಲ್ಲಿ ರೈತರು ರಸ್ತೆ ತಡೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಗಬ್ಬೂರು ಬೈಪಾಸ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ, ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು ಎಂದು ರೈತ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಇನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದ ಮುಂದೆಯೂ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಜಿಲ್ಲೆಯಾದ್ಯಂತ ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಪ್ರತಿಭಟನಾಕಾರರು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಪೊಲೀಸ್ ಕಮಿಷನರ್ ಮನವಿ ಮಾಡಿದ್ದಾರೆ.

ಒಟ್ಟಿನಲ್ಲಿ, ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಪ್ರತಿಭಟನೆ ಶಾಂತಿಯುತವಾಗಿ ನಡೆಯುವಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

About The Author