- Advertisement -
Hubli News: ಹುಬ್ಬಳ್ಳಿ: 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿತು.
ಈದ್ಗಾ ಮೈದಾನದಲ್ಲಿ ಮಹಾತ್ಮಾ ಗಾಂಧಿ, ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಅವರಿಂದ ಧ್ವಜಾರೋಹಣ ನೆರವೇರಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್, ಶಾಸಕ ಮಹೇಶ ಟೆಂಗಿನಕಾಯಿ, ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ್ ಎಲಿಗಾರ, ಪಾಲಿಕೆ ಸದಸ್ಯರಾದ ನಿರಂಜನಯ್ಯ ಹಿರೇಮಠ, ಚಂದ್ರೀಕಾ ಮೇಸ್ತ್ರಿ, ರಾಜಣ್ಣ ಕೊರವಿ, ಪಾಲಿಕೆ ಅಧಿಕಾರಿಗಳಾದ ವಿಜಯಕುಮಾರ ಸೇರಿದಂತೆ, ಸಿಬ್ಬಂದಿ ಪಾಲಿಕೆ ಸದಸ್ಯರು ಭಾಗಿಯಾಗಿದ್ದರು.
- Advertisement -