Hubli News: ಹುಬ್ಬಳ್ಳಿಯಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಸುಮಾರು 4 ಲಕ್ಷ 80 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಧಾರವಾಡ ತಾಲೂಕಿನ ನವಲೂರು ಗ್ರಾಮದ ಶೋಭಾ ಗಿಡ್ಡಲಿಂಗನವರ ಅವರು ಹೊಸೂರು ಬಸ್ ನಿಲ್ದಾಣದಿಂದ ಪಾಣಿಗಟ್ಟಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರ ಬ್ಯಾಗ್ನಲ್ಲಿದ್ದ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.
ಮಹಿಳೆಯ ದೂರಿನ ಪ್ರಕಾರ, ಬ್ಯಾಗ್ನಲ್ಲಿದ್ದ 50 ಗ್ರಾಂ ತೂಕದ ಚಿನ್ನದ ಸರ, ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಹಾಗೂ 10 ಗ್ರಾಂ ತೂಕದ ಮತ್ತೊಂದು ಚಿನ್ನದ ಸರ, ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಆಭರಣ ಕಳುವಾಗಿದೆ. ಒಟ್ಟಾರೆ 4 ಲಕ್ಷ 80 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿದೆ.
ಘಟನೆ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಹಾಗೂ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




