Hubli News: ಶಾಲಾ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರು, ಶಾಲಾ ವಾಹನಗಳ ಚಾಲಕರ ತಪಾಸಣೆ ನಡೆಸಿದ್ದಾರೆ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ್ ಹಾಗೂ ಬಸ್‌ಗಳ ದಾಖಲೆಗಳನ್ನು ಪರಿಶೀಲಿಸಿ ಸುರಕ್ಷಿತ ಸಂಚಾರಕ್ಕೆ ಒತ್ತು ನೀಡಿದ್ದಾರೆ.
ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ವಿಶೇಷ ತಪಾಸಣೆ ಕಾರ್ಯಾಚರಣೆ ನಡೆಸಲಾಯಿತು.
ಪ್ರತಿದಿನ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ್ ಹಾಗೂ ಬಸ್‌ಗಳನ್ನು ತಡೆದು ಚಾಲಕರ ದಾಖಲೆಗಳನ್ನು ಪರಿಶೀಲಿಸಲಾಯಿತು.
ಈ ವೇಳೆ ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದಾರೆಯೇ ಎಂಬುದನ್ನು ಡ್ರಿಂಕ್ ಅಂಡ್ ಡ್ರೈವ್ ಪರೀಕ್ಷೆಯ ಮೂಲಕ ತಪಾಸಣೆ ಮಾಡಲಾಯಿತು.
ಜೊತೆಗೆ ಚಾಲನಾ ಪರವಾನಗಿ, ವಾಹನದ ನೋಂದಣಿ ದಾಖಲೆ, ವಿಮೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ನಿಯಮ ಪಾಲನೆ ಕುರಿತು ಸೂಚನೆ ನೀಡಲಾಯಿತು.
ಶಾಲಾ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆ ಅತ್ಯಂತ ಮುಖ್ಯವಾಗಿದ್ದು, ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ನಿಯಮ ಉಲ್ಲಂಘಿಸುವ ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಪೊಲೀಸರು, ಮಕ್ಕಳ ಸುರಕ್ಷಿತ ಸಂಚಾರಕ್ಕಾಗಿ ಇಂತಹ ತಪಾಸಣೆ ಮುಂದುವರಿಯಲಿದೆ ಎಂದು ಹೇಳಿದರು.
ಟ್ರಾಫಿಕ್ ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರು ಹಾಗೂ ಪೋಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.




