Hubli News: ಹುಬ್ಬಳ್ಳಿಯಲ್ಲಿ ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಇಇ ಕಿರಣ್ ಕುಮಾರ್ ಬೈಂದೂರ್‌ಗೆ ಸೇರಿದ ಮನೆ, ಕಚೇರಿ ಸೇರಿದಂತೆ ಒಟ್ಟು ನಾಲ್ಕು ಕಡೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ಎಇಇ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಣ್ ಕುಮಾರ್ ಬೈಂದೂರ್‌ಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ ನಗರದ ಅಕ್ಷಯ ಕಾಲೋನಿಯಲ್ಲಿರುವ ಮನೆ ಹಾಗೂ ಕಚೇರಿ ಸೇರಿದಂತೆ ಒಟ್ಟು ನಾಲ್ಕು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ.
ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಹಾಗೂ ಕಚೇರಿಯಲ್ಲಿರುವ ದಾಖಲೆಗಳು, ಕಡತಗಳು ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
ದಾಳಿಯ ವೇಳೆ ಏನೆಲ್ಲ ದಾಖಲೆಗಳು ಪತ್ತೆಯಾಗಿವೆ, ದಾಳಿಗೆ ನಿಖರ ಕಾರಣವೇನು ಎಂಬುದು ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಬಳಿಕವಷ್ಟೇ ತಿಳಿದುಬರಬೇಕಿದೆ.




