Hubli News: ಅಪ್ರಾಪ್ತನ ಕೈಯಲ್ಲಿ ಬೈಕ್ – ತಂದೆಗೆ ₹25 ಸಾವಿರ ದಂಡ

Hubli News: ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಡುವ ಪೋಷಕರೇ ಎಚ್ಚರ… ಅಪ್ರಾಪ್ತನಿಗೆ ಬೈಕ್ ನೀಡಿದ ತಂದೆಗೆ ನ್ಯಾಯಾಲಯ ಬರೋಬ್ಬರಿ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದ ಘಟನೆ ಇದೀಗ ಪೋಷಕರಿಗೆ ಎಚ್ಚರಿಕೆಯ ಸಂದೇಶ ನೀಡಿದೆ.

ಹೌದು… ಅಪ್ರಾಪ್ತ ಮಕ್ಕಳಿಗೆ ಬೈಕ್ ಸೇರಿದಂತೆ ವಾಹನಗಳನ್ನು ನೀಡುವ ಪೋಷಕರೇ ಎಚ್ಚರವಾಗಿರಿ. ಮಕ್ಕಳ ಕೈಗೆ ವಾಹನ ಕೊಟ್ಟರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಹುಬ್ಬಳ್ಳಿಯ ವಿದ್ಯಾನಗರ ರಸ್ತೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಉತ್ತರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಅಪ್ರಾಪ್ತ ಬಾಲಕನ ಜೊತೆಗೆ ಬೈಕ್ ನೀಡಿದ ಪಾಲಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು, ಬೈಕ್ ಜಪ್ತಿ ಮಾಡಲಾಗಿತ್ತು. ಬಳಿಕ ಈ ಕುರಿತು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿ, ನೋಟಿಸ್ ಜಾರಿಗೊಳಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಪ್ರಾಪ್ತನ ತಂದೆಗೆ 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಮಕ್ಕಳ ಸುರಕ್ಷತೆ ಜೊತೆಗೆ ರಸ್ತೆ ಸುರಕ್ಷತೆಯ ದೃಷ್ಟಿಯಿಂದಲೂ ಪೋಷಕರು ಜವಾಬ್ದಾರಿಯಿಂದ ವರ್ತಿಸಬೇಕಿದೆ.

About The Author