- Advertisement -
Hubli News: ಹುಬ್ಬಳ್ಳಿ: ಸರ್ಕಾರಗಳು ಬರುತ್ತಿರುತ್ತವೇ, ಹೋಗುತ್ತಿರುತ್ತವೆ. ವ್ಯಕ್ತಿಗಳು ಬರುತ್ತಿರುತ್ತಾರೆ, ಹೋಗುತ್ತಿರುತ್ತಾರೆ. ಆದರೆ ಜನಮಾನಸದಲ್ಲಿ ನೆಲೆಯಾಗುವಂತ ಕೆಲಸವನ್ನು ಜನಪ್ರತಿನಿಧಿಗಳು ಮಾಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಬೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿಶೇಷವಾಗಿದೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಅಸಂಘಟಿತ ಕಾರ್ಮಿಕ ವಲಯದ ವ್ಯಾಪ್ತಿ ಬಹಳ ದೊಡ್ಡದಾಗಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಕೂಡ ಯೋಜನೆಯ ಲಾಭ ತಲುಪುವಂತಾಗಬೇಕು. ಸರ್ಕಾರವೂ ಕೂಡ ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.
- Advertisement -