Hubli News: ಬಿಆರ್‌ಟಿಎಸ್ ಮಾರ್ಗದಲ್ಲಿ ಮತ್ತಷ್ಟು ಸ್ಪೀಡ್ ಬ್ರೇಕರ್

Hubli News: ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಮಾರ್ಗದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಎಚ್‌ಡಿಬಿಆರ್‌ಟಿಎಸ್ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬಿಆರ್‌ಟಿಎಸ್ ಕಾರಿಡಾರ್ ಹಾಗೂ ಮಿಶ್ರ ಸಂಚಾರ ಮಾರ್ಗದಲ್ಲಿ ಹೊಸದಾಗಿ 10 ರಿಂದ 15 ಸ್ಪೀಡ್ ಬ್ರೇಕರ್‌ಗಳನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಮಾರ್ಗ ಹಾಗೂ ಪ್ರಮುಖ ಕ್ರಾಸಿಂಗ್‌ಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಎಚ್‌ಡಿಬಿಆರ್‌ಟಿಎಸ್ ಹೆಚ್ಚುವರಿ ಸ್ಪೀಡ್ ಬ್ರೇಕರ್‌ಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ.

ಈ ಹಿನ್ನೆಲೆಯಲ್ಲಿ ನಗರದ ವಿವಿಧ ಜಂಕ್ಷನ್‌ಗಳು ಹಾಗೂ ಕ್ರಾಸ್‌ಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, 10 ರಿಂದ 15 ಹೊಸ ಸ್ಪೀಡ್ ಬ್ರೇಕರ್‌ಗಳನ್ನು ನಿರ್ಮಿಸಲು ನಗರ ಭೂಸಾರಿಗೆ ನಿರ್ದೇಶನಾಲಯಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈಗಾಗಲೇ ಮಿಶ್ರ ಸಂಚಾರ ಮಾರ್ಗದಲ್ಲಿ ನಿರ್ಮಿಸಿರುವ ಕೆಲವು ಸ್ಪೀಡ್ ಬ್ರೇಕರ್‌ಗಳು ವೈಜ್ಞಾನಿಕವಾಗಿ ನಿರ್ಮಾಣವಾಗಿಲ್ಲ ಎಂಬ ಕಾರಣಕ್ಕೆ ವಾಹನ ಸವಾರರಿಂದ ಸಾಕಷ್ಟು ದೂರುಗಳು ವ್ಯಕ್ತವಾಗಿದ್ದವು. ಕಡಿಮೆ ಉದ್ದ, ಸೂಕ್ತ ಗುರುತುಗಳ ಕೊರತೆಯಿಂದ ವಾಹನಗಳು ಬಲವಾಗಿ ಅಪ್ಪಳಿಸುತ್ತಿದ್ದು, ಕಾರುಗಳ ಕೆಳಭಾಗ ಹಾನಿಯಾಗುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಭಾರತೀಯ ರಸ್ತೆ ಕಾಂಗ್ರೆಸ್ (IRC) ಮಾರ್ಗಸೂಚಿಯಂತೆ ವೈಜ್ಞಾನಿಕ ಮಾದರಿಯಲ್ಲಿ ಹೊಸ ಸ್ಪೀಡ್ ಬ್ರೇಕರ್‌ಗಳನ್ನು ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಅಪಘಾತಗಳನ್ನು ತಡೆಗಟ್ಟುವುದರ ಜೊತೆಗೆ ವಾಹನ ಸವಾರರಿಗೆ ಸುರಕ್ಷಿತ ಸಂಚಾರ ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

About The Author