Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನ ಭವಿಷ್ಯಇಂದೇ ನಿರ್ಧಾರ ಅಗಲಿದೆ. ಹಂತಕ ಫಯಾಜ್‌ಗೆ ಜೈಲಾ..? ಬೇಲಾ..? ಎಂಬುವುದರ ಬಗ್ಗೆ ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿರುವ ಹಂತಕ ಫಯಾಜ್, ಈಗಾಗಲೇ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಕಳೆದ ಆಗಷ್ಟ 6 ರಂದು ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಹೀಗಾಗಿ ಜಾಮೀನಿಗಾಗಿ ಫಯಾಜ್ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕಳೆದ 1 ವರ್ಷ 5 ತಿಂಗಳಿಂದ ಧಾರವಾಡ ಕಾರಾಗೃಹದಲ್ಲಿರೋ ಫಯಾಜ್, ಎಪ್ರಿಲ್ 18,2024 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ಕೊಲೆ ಮಾಡಿದ್ದ. ಕೊಲೆ ಮಾಡಿ ಜೈಲು ಸೇರಿರುವ ಹಂತಕನ ಭವಿಷ್ಯ ಇಂದು ನಿರ್ಧಾರವಾಗಲಿದೆ.




