Hubli News: ಹುಬ್ಬಳ್ಳಿ: ಬೆಳಗಾವಿ ಗಾಂಧಿ ಸಮಾವೇಶನದ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್ನಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದು, ನಾಲ್ಕು ಜಿಲ್ಲೆಗಳ ಕಾಂಗ್ರೆಸ್ ಮುಖಂಡರನ್ನು ಕರೆಯಿಸಿ ಸಭೆ ಮಾಡಿದ್ದು, ಬೆಳಗಾವಿ ಗಾಂಧಿ ಸಮಾವೇಶಕ್ಕೆ ಹೆಚ್ಚಿನ ಜನ ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಹೇಳಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಗಾಂಧಿ, ಸಂವಿಧಾನದ ಬಗ್ಗೆ ಜನರಿಗೆ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಸಬೇಕೆಂದು ಈ ಸಭೆಯನ್ನು ಕರೆದಿದ್ದು. ಆಂತರಿಕ ಕಲಾಪ ವಿಚಾರ, ಈ ಸಭೆಯಲ್ಲಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಎಐಸಿಸಿ ಅಧ್ಯಕ್ಷರು ಈ ಬಗ್ಗೆ ಯಾವುದೇ ರೀತಿ ಮಾತನಾಡಬಾರದೆಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡೊದಿಲ್ಲ ಎಂದರು.




