- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ಮೂರನೇ ದಿನವಾದ ಶುಕ್ರವಾರ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ.
ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸ್ವರ್ಣ ಗ್ರೂಪ್ ಮಾಲೀಕ ವಿ.ಎಸ್.ವಿ ಪ್ರಸಾದ್, ಶಾಸಕ ಮಹೇಶ ಟೆಂಗಿನಕಾಯಿ, ಸಂಜೀವ ಬಡಸ್ಕರ, ಸಂತೋಷ ಚವ್ಹಾಣ ಸೇರಿದಂತೆ ಇತರರು ಭಾಗವಹಿಸಿದ್ದರು.
ಇನ್ನೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಸಮೂಹ ಸಂಭ್ರಮಾಚರಣೆಯಲ್ಲಿ ಭಾಗವಹಿಸುವ ಮೂಲಕ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ.
- Advertisement -