Hubli News: ಹುಬ್ಬಳ್ಳಿ: ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಪ್ರತಿಭಟನೆ ಮಾಡಿದರು.
ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ವರ್ಷಕ್ಕೆ 4 ಸಾವಿರ ನೀಡಲಾಗುತ್ತದೆ. ರಸಗೊಬ್ಬರ, ಔಷಧಿ, ಮತ್ತು ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡಿ ರೈತರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದೆ. 15-15-15 ರಸ ಗೊಬ್ಬರ ಬೆಲೆ ಹಿಂದೆ 1250 ರೂ. ಇದ್ದು, ಇದೀಗ 1650 ರೂ. ಹೆಚ್ಚಳ ಮಾಡಲಾಗಿದೆ. ಯೂರಿಯಾ ಬೆಲೆ 266 ರಿಂದ 280ಕ್ಕೆ ಏರಿಕೆ ಮಾಡಿದೆ, ಎಂಓಓ ಪೊಟ್ಯಾಶ್ 1550 ದಿಂದ 1800 ರೂ ಹೆಚ್ಚಳ ಮಾಡಲಾಗಿದೆ. ರೈತರು ಅತಿವೃಷ್ಠಿ ಮತ್ತು ಅನಾವೃಷ್ಠಿಯಿಂದಾಗಿ ಸಂಕಷ್ಟದಲ್ಲಿದ್ದಾರೆ. ಬೆಳೆಹಾನಿ ಸಾಲ ಮಾಡಿದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ಇದೀಗ ರಸಗೊಬ್ಬರ ಬೆಲೆ ಏರಿಕೆ ಮಾಡಿ ರೈತರನ್ನು ದಿವಾಳಿಯನ್ನಾಗಿ ಮಾಡಲು ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ಹೊರ ಹಾಕಿದರು.




