Wednesday, August 20, 2025

Latest Posts

Hubli News: ಬೀದಿನಾಯಿಗಳ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಲಕ್ಷ್ಯ: ಸಾರ್ವಜನಿಕರ ಆರೋಪ

- Advertisement -

Hubli News: ಹುಬ್ಬಳ್ಳಿ: ಬೀದಿ ನಾಯಿಗಳ ಬಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅದೆಷ್ಟು ಬೇಜವಾಬ್ದಾರಿ ತೋರುತ್ತಿದೆ ಎಂದರೇ ನಿಜಕ್ಕೂ ಕಾರ್ಯಾಚರಣೆ, ಸಂತಾನಹರಣಕ್ಕೆ ಮಾತ್ರ ಮುಂದಾಗುತ್ತಿಲ್ಲ. ಈಗ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನ ನೀಡಿದ್ದು, ಇನ್ನಾದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತಾ..? ಎಂಬುವಂತ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ವಸತಿ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು. ಜನನಿಬಿಡ ಪ್ರದೇಶದಲ್ಲಿ ಸಾರ್ವಜನಿಕರ ಓಡಾಟಕ್ಕೆ ಹಾಗೂ ಜನಜೀವನಕ್ಕೆ ದಕ್ಕೆಯನ್ನುಂಟು ಮಾಡುವ ಬೀದಿ ನಾಯಿಗಳ ಕಾರ್ಯಾಚರಣೆ ಸ್ಥಳೀಯ ಆಡಳಿತ ಮಂಡಳಿ ಮುಂದಾಗಬೇಕು.

ಅಲ್ಲದೇ ಅದಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಅಡ್ಡಿಪಡಿಸಿದರೆ, ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದ್ದು, ಇನ್ನಾದರೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸಬೇಕಿದೆ.

ಇನ್ನೂ ಅವಳಿನಗರದಲ್ಲಿ ಸುಮಾರು 30,000 ಬೀದಿ ನಾಯಿಗಳಿದ್ದು, ಕಾರ್ಯಾಚರಣೆಗೆ ಪಾಲಿಕೆ ಮುಂದಾಗಬೇಕಿದೆ. ಬೀದಿ ನಾಯಿ ಕಡಿತ ಪ್ರಕರಣಗಳು ಮತ್ತು ಹೆಚ್ಚುತ್ತಿರುವ ರೇಬಿಸ್ ಸಾವಿನ ಹಿನ್ನೆಲೆಯಲ್ಲಿ, ಸರ್ವೋಚ್ಚ ನ್ಯಾಯಾಲಯ ಈ ನಿರ್ದೇಶನ ನೀಡಿದ್ದು, ರೇಬೀಸ್ ಸಾವಿನ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮ ವರದಿಗಳನ್ನು ಗಮನಿಸಿದ ನಂತರ, ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿದೆ. “ಇದು ಸಾರ್ವಜನಿಕ ಹಿತಾಸಕ್ತಿಗಾಗಿ, ಯಾವುದೇ ಭಾವನಾತ್ಮಕ ಅಂಶಗಳನ್ನು ಒಳಗೊಳ್ಳಬಾರದು. ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಪಾರ್ದಿವಾಲಾ ಹೇಳಿದ್ದಾರೆ.

ಒಟ್ಟಿನಲ್ಲಿ ಬೀದಿ ನಾಯಿಗಳ ಕಾರ್ಯಾಚರಣೆ ಬಗ್ಗೆ ಸುಪ್ರೀಂ ಸೂಕ್ತ ನಿರ್ದೇಶನ ನೀಡಿದ್ದು, ಜನಜೀವನಕ್ಕೆ ಹಾನಿ ಉಂಟು ಮಾಡುವ ಬೀದಿ ನಾಯಿಗಳ ಹಾವಳಿ ತಗ್ಗಿಸಲು ಪಾಲಿಕೆ ಮುಂದಾಗುತ್ತದೆಯೇ..? ಎಂಬುವುದನ್ನು ಕಾದುನೋಡಬೇಕಿದೆ.

ಸಂಗಮೇಶ ಸತ್ತಿಗೇರಿ ಕರ್ನಾಟಕ ಟಿವಿ ಹುಬ್ಬಳ್ಳಿ

- Advertisement -

Latest Posts

Don't Miss