Hubli News: ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ: ಎ‌.ನಾರಾಯಣಸ್ವಾಮಿ

Hubli News: ಹುಬ್ಬಳ್ಳಿ: ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ. ಸಿದ್ದರಾಮಯ್ಯನವರು ನುಡಿದಂತೆ ನಡೆಯುತ್ತಾರೆಂದು ಹಿಂದುಳಿದ ವರ್ಗ ನಂಬಿತ್ತು. ಆದರೆ ಜನರಿಗೆ ಮೋಸ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರದ ಮಾಜಿ ಸಚಿವ ಎ‌.ನಾರಾಯಣಸ್ವಾಮಿ ಕಿಡಿಕಾರಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಶಸ್ತ್ರಾಸ್ತ್ರಗಳನ್ನ ಕೆಳಗೆ ಇರಿಸಿ ಬಿಟ್ಟಿದ್ದಾರೆ. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಅವರಿಂದ ಆಗಿಲ್ಲ. ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತ್ ಚುನಾವಣೆ ಮಾಡಲು ಅಗುತ್ತಿಲ್ಲ ಎಂದರು‌.

ರಾಜ್ಯದ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಹೋಗಿದೆ. ಸಮಾಜ ಕಲ್ಯಾಣ ಸಚಿವ ಮಹದೇವಪ್ಪನವರು ಮೀಸಲಾತಿ ಕೊಟ್ಟದ್ದರೇ ಹಿಂದುಳಿದ ವರ್ಗಗಳ‌ ಜನರ ಬದುಕು ಹಸನಾಗ್ತಾ ಇತ್ತು. ನಮ್ಮ ತಾಳ್ಮೆ ಕಟ್ಟೆ ಒಡೆದು ಹೋಗಿದೆ, ಹೀಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಅವರು ಹೇಳಿದರು‌.

About The Author