Hubli News: ಪತ್ನಿ-ಅತ್ತೆ ಕಿರುಕುಳ ತಾಳಲಾರದೇ ಬದುಕು ಅಂತ್ಯವಾಗಿಸಿದನಾ ಪವರ್ ಮ್ಯಾನ್..?

Hubli News: ಕುಂದಗೋಳ ಹೆಸ್ಕಾಂ ಕಚೇರಿಯಲ್ಲಿ ಪವರ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಹುಬ್ಬಳ್ಳಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪತ್ನಿ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ತಂದೆ ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕುಂದಗೋಳದ ಹೆಸ್ಕಾಂ ಕಚೇರಿಯಲ್ಲಿ ಪವರ್‌ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ ಡೊಂಬರ (28) ಎಂಬ ಯುವಕ ಹುಬ್ಬಳ್ಳಿಯ ಆರ್.ಎಂ. ಲೋಹಿಯಾ ನಗರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೃತನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಮೃತನ ಪತ್ನಿ ಮೇಘಾ, ಅತ್ತೆ ಶೋಭಾ ಹಾಗೂ ಸಹೋದರ ರಾಜೇಶ ಅವರ ಕಿರುಕುಳದಿಂದ ಮನನೊಂದು ಮಂಜುನಾಥ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ತಂದೆ ಆರೋಪಿಸಿದ್ದಾರೆ.

ಈ ಸಂಬಂಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಗಳ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕವೇ ತಿಳಿದುಬರಬೇಕಿದ್ದು, ಪ್ರಕರಣದ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

About The Author