Hubli News: ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ “ತಿರಂಗಾ ಯಾತ್ರೆ”ಯ ನಿಮಿತ್ತ ಜರುಗಿದ ಬೈಕ್ ರ್ಯಾಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹರ್ ಘರ್ ತಿರಂಗಾ ಯಾತ್ರೆಯ ಪ್ರಯುಕ್ತವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯುವ ಮೋರ್ಚಾ ವತಿಯಿಂದ ವಿನೂತನ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಸಾವಿರಾರು ಜನ ಕಾರ್ಯಕರ್ತರು ಹಾಗೂ ಬಿಜೆಪಿ ಅಭಿಮಾನಿಗಳು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು. ಅಲ್ಲದೇ ಹುಬ್ಬಳ್ಳಿಯ ಗೋಪನಕೊಪ್ಪದಿಂದ ಆರಂಭಗೊಂಡ ರ್ಯಾಲಿ, ಕಿತ್ತೂರು ಚೆನ್ನಮ್ಮ ವೃತ್ತಕ್ಕೆ ಬಂದು ಮುಕ್ತಾಯಗೊಂಡಿದೆ.
ಇನ್ನೂ ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಿಜೆಪಿ ತಿರಂಗಾ ಯಾತ್ರೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿರುವುದು ವಿಶೇಷವಾಗಿದೆ. ಇದೇ ವೇಳೆ ಸೈನಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.




