Hubli News: ವಿನಯ್ ಕುಲಕರ್ಣಿಗೆ ಜಾಮೀನು; ಧಾರವಾಡದಲ್ಲಿ ಸಂಭ್ರಮ

Hubli : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಬೆನ್ನಲ್ಲೇ, ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಹೈಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ, ಜೀವಾವಧಿ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಟ್ಟ ಬೆನ್ನಲ್ಲೇ ಧಾರವಾಡದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.

ಧಾರವಾಡದ ಜುಬ್ಲಿ ವೃತ್ತದಲ್ಲಿ ಸೇರಿದ್ದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.

ಈ ವೇಳೆ “ವಿನಯ್ ಕುಲಕರ್ಣಿಗೆ ಜಯವಾಗಲಿ”, “ನ್ಯಾಯಕ್ಕೆ ಜಯವಾಗಿದೆ” ಎಂದು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ನ್ಯಾಯಾಂಗ ವ್ಯವಸ್ಥೆಯ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇತ್ತು. ಕೊನೆಗೂ ನ್ಯಾಯ, ನೀತಿ ಮತ್ತು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಬೆಂಬಲಿಗರು ಪ್ರತಿಕ್ರಿಯಿಸಿದರು.

ಹೈಕೋರ್ಟ್ ಆದೇಶದ ಬಳಿಕ ಧಾರವಾಡದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದು, ವಿನಯ್ ಕುಲಕರ್ಣಿ ಬಿಡುಗಡೆಯಾಗಿ ಧಾರವಾಡಕ್ಕೆ ಆಗಮಿಸುವ ನಿರೀಕ್ಷೆಯಲ್ಲಿ ಬೆಂಬಲಿಗರು ಕಾಯುತ್ತಿದ್ದಾರೆ.

About The Author