Hubli News: ವಿಶ್ವ ಪರಿಸರ ದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಬೃಹತ್ ಗಿಡ ನೆಡುವ ಅಭಿಯಾನ ನಡೆಯಿತು. ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ವಿಶ್ವ ಪರಿಸರ ದಿನದ ಪ್ರಯುಕ್ತ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಸಾವಿರಾರು ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ನಿರ್ಮಾಣದ ಸಂದೇಶವನ್ನು ನೀಡಲಾಯಿತು. ಕಾರ್ಯಕ್ರಮಕ್ಕಾಗಿ ಕಳೆದ ಹಲವು ವಾರಗಳಿಂದಲೇ ಸ್ಥಳಗಳ ಆಯ್ಕೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ಬಿಜೆಪಿ ಕಾರ್ಯಕರ್ತರು ದೇಶಾದ್ಯಂತ ಗಿಡ ನೆಡುವ ಅಭಿಯಾನದಲ್ಲಿ ತೊಡಗಿಕೊಂಡಿದ್ದು, ಅದರ ಭಾಗವಾಗಿ ಕ್ಷೇತ್ರದಲ್ಲಿಯೂ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು.
ಗಿಡ ನೆಡುವ ಕಾರ್ಯದಲ್ಲಿ ಪಕ್ಷದ ಮುಖಂಡರು, ಮಹಿಳಾ ಕಾರ್ಯಕರ್ತರು, ಯುವಕರು, ಯುವತಿಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮ ಹಬ್ಬದ ವಾತಾವರಣದಲ್ಲಿ ನಡೆಯಿತು.




