- Advertisement -
Hubli News: ಹುಬ್ಬಳ್ಳಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ನಗರದ ಹೆಗ್ಗೆರಿ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್ ಮೂದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ ಮನನೊಂದು ಸಾವಿನ ಹಾದಿ ಹಿಡಿದಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಸದ್ಯ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೂ ಸಾವಿಗೀಡಾದ ಯುವಕ ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
- Advertisement -