Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತಷ್ಟು ರಾಜಕೀಯ ತಿರುವು ಪಡೆದುಕೊಂಡಿದೆ. ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿ ಎನ್ಯೂಮರೇಷನ್ ಫಾರ್ಮ್ ವಿತರಣೆ ನಡೆಸಿದ್ದಾರೆ ಎಂದು ಆರೋಪಿಸಿ, ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಕಾಂಗ್ರೆಸ್ ಅಧಿಕೃತ ದೂರು ಸಲ್ಲಿಸಿದೆ.
ಆದರೆ, ಶಾಸಕ ಮಹೇಶ್ ಟೆಂಗಿನಕಾಯಿ ಅವರು ಯಾವುದೇ ಅಧಿಕೃತ BLO ಅಥವಾ BLA ಅಲ್ಲದಿದ್ದರೂ ವಿವಿಧ ಬೂತ್‌ಗಳಿಗೆ ತೆರಳಿ ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದು ಚುನಾವಣಾ ಆಯೋಗದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದೆ.
ಇದರ ಜೊತೆಗೆ, ಅಲ್ಪಸಂಖ್ಯಾತರು ಹಾಗೂ ಎಸ್‌ಸಿ-ಎಸ್‌ಟಿ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಗಂಭೀರ ಆರೋಪವನ್ನೂ ಕಾಂಗ್ರೆಸ್ ದೂರಿನಲ್ಲಿ ಪ್ರಸ್ತಾಪಿಸಿದೆ. ಚುನಾವಣಾ ಆಯೋಗದ ನಿಯಮ ಉಲ್ಲಂಘನೆಯಾಗಿದ್ದರೆ ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಸದ್ಯ ಈ ದೂರಿನ ಕುರಿತು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸುವ ನಿರೀಕ್ಷೆಯಿದ್ದು, ಎಸ್‌ಐಆರ್ ಪ್ರಕ್ರಿಯೆ ಸುತ್ತ ರಾಜಕೀಯ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ತೀವ್ರಗೊಂಡಿವೆ. ಪ್ರಕರಣಕ್ಕೆ ಚುನಾವಣಾ ಇಲಾಖೆ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
