Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕರಿಬ್ಬರ ಮೇಲೆ ರಾಜಕೀಯ ಮುಖಂಡನೊಬ್ಬ ಕಾರು ಹಾಯಿಸಿ ಹಲ್ಲೆಗೆ ಯತ್ನಿಸಿದ್ದಾನೆ. ಪರಿಣಾಮ ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಘಟನೆ ಈಗಷ್ಟೇ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದರಾಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ಸದಸ್ಯನ ಮಗ ಚಿದಾನಂದ ನರಗುಂದ ಎಂಬಾತ ರಸ್ತೆಯಲ್ಲಿ ವಾಹನ ಪಾರ್ಕ್ ಮಾಡುವ ವಿಚಾರಕ್ಕೆ ಇಬ್ಬರು ಯುವಕರ ಮೇಲೆ ಕಾರು ಹಾಯಿಸಿದ್ದಾನೆ.
ನಂತರ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ ಅಂತಾ ಆರೋಪ ಕೇಳಿ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಎಸಿಪಿ ಶಿವಪ್ರಕಾಶ ನಾಯ್ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಮಾಹಿತಿ ಪಡೆದಿದ್ದಾರೆ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




