Hubli: ಕಬ್ಬು ಬೆಳೆಗಾರರ ಹೋರಾಟ ತೀವ್ರ: ಹತ್ತರಗಿಯಿಂದ ಹುಬ್ಬಳ್ಳಿ ಚಲೋ ಪಾದಯಾತ್ರೆ

Hubli: ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಇದೀಗ ಹೋರಾಟಕ್ಕೆ ಪಾದಯಾತ್ರೆಯ ರೂಪ ನೀಡಿರುವ ರೈತರು, ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್‌ನಿಂದ ಹುಬ್ಬಳ್ಳಿ ಚಲೋ ಆರಂಭಿಸಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಆರಂಭವಾಗಿರುವ ಈ ಪಾದಯಾತ್ರೆ, ರೈತರ ಆಕ್ರೋಶದ ಕಿಚ್ಚು ಇನ್ನಷ್ಟು ವ್ಯಾಪಿಸುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ಜಮಾಯಿಸಿದ ಕಬ್ಬು ಬೆಳೆಗಾರರು, ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹುಬ್ಬಳ್ಳಿ ಚಲೋ ಪಾದಯಾತ್ರೆ ಆರಂಭಿಸಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಸಾಗುತ್ತಿರುವ ರೈತರು, ರೈತರ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಮುನ್ನಡೆಯುತ್ತಿದ್ದಾರೆ.

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ರೈತರ ಪ್ರಮುಖ ಆಗ್ರಹವಾಗಿದೆ. ತಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲು ರೈತರು ಇದೀಗ ಪಾದಯಾತ್ರೆಯ ಹಾದಿ ಹಿಡಿದಿದ್ದಾರೆ.

ಇನ್ನು ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48ರ ಒಂದು ಬದಿಯಲ್ಲಿ ರೈತರು ಪಾದಯಾತ್ರೆ ನಡೆಸುತ್ತಿದ್ದಾರೆ. ಇಂದು ರಾತ್ರಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದವರೆಗೆ ತೆರಳಲು ರೈತರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ, ಹತ್ತರಗಿಯಿಂದ ಆರಂಭವಾಗಿರುವ ಈ ಹುಬ್ಬಳ್ಳಿ ಚಲೋ ಪಾದಯಾತ್ರೆ ಹೋರಾಟಕ್ಕೆ ಮತ್ತಷ್ಟು ಬಲ ನೀಡುವ ನಿರೀಕ್ಷೆಯಿದೆ.

ಒಟ್ಟಿನಲ್ಲಿ, ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಸರ್ಕಾರ ರೈತರ ಬೇಡಿಕೆಗಳಿಗೆ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

About The Author