Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಸಾಕಷ್ಟು ಮುನ್ನೆಲೆಗೆ ಬಂದಿದ್ದು, ವೀರಶೈವ ಲಿಂಗಾಯತ ಸಮಾವೇಶದ ಬೆನ್ನಲ್ಲೇ ಈಗ ಮತ್ತೇ ಪಂಚಮಸಾಲಿ ಸಮಾಜದ ಸ್ವಾಮೀಜಿಗಳು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
ಇದೇ 22 ರಿಂದ ರಾಜ್ಯದಲ್ಲಿ ಜಾತಿ ಗಣತಿ ಆರಂಭವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ಮನೆ ಮೆನೆಗೆ ಹೋಗಿ ಪಂಚಮಸಾಲಿ ಸ್ವಾಮೀಜಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಯಿಂದ ಜಾಗೃತಿ ಮೂಡಿಸಲಾಗುತ್ತಿದ್ದು, ಮನೆ ಮನೆಗೆ ತೆರಳಿ ಕರಪತ್ರ ಅಂಟಿಸಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಲು ವಚನಾನಂದ ಸ್ವಾಮೀಜಿ ಮುಂದಾಗಿದ್ದಾರೆ.




