Friday, July 18, 2025

Latest Posts

Hubli: ಹುಬ್ಬಳ್ಳಿಯ ಬಿಜೆಪಿ ಕಚೇರಿಗೆ ನುಗ್ಗಲು ಯುವ ಕಾಂಗ್ರೆಸ್ ಯತ್ನ, ಹೈ ಡ್ರಾಮಾ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್‌ನವರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಹೈ ಡ್ರಾಮಾ ಸೃಷ್ಟಿಸಿದ್ದಾರೆ.

ಹುಬ್ಬಳ್ಳಿ ನಗರದ ಅರವಿಂದ ನಗರದಲ್ಲಿರೋ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವ ಯುವ ಕಾಂಗ್ರೆಸ್, ಪ್ರಧಾನಿ ಮೋದಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಪ್ರತಿಭಟನೆಗೆ ಕಾರಣವೇನು ಅಂತಾ ನೋಡೋದಾದ್ರೆ, ಇಂದಿರಾಗಾಂಧಿ ಅವರನ್ನು ಹಿಟ್ಲರ್ ಅಂತ ತೋರಿಸಿ ಬಿಜೆಪಿಗರು ವಿಡಿಯೋ ಹರಿಬಿಟ್ಟಿದ್ದರು. ತುರ್ತು ಪರಿಸ್ಥಿತಿ ಹೇರಿ 50 ವರ್ಷವಾಗಿದ್ದ ಸಂದರ್ಭದಲ್ಲಿ ಈ ವೀಡಿಯೋ ವೈರಲ್ ಮಾಡಲಾಗಿತ್ತು. ಇದನ್ನು ವಿರೋಧಿಸಿ, ಯುವ ಕಾಂಗ್ರೆಸ್ ಪ್ರತಿಭಟಿಸಿತ್ತು.

ಇದೇ ಕಾರಣಕ್ಕೆ ಮೋದಿ ಕೂಡ ಹಿಟ್ಲರ್ನಂತೆ ಎಂದು. ಮೋದಿಯವರನ್ನು ಹಿಟ್ಲರ್ಗೆ ಹೋಲಿಸಿ, ಪೋಸ್ಟರ್ ಹಿಡಿದು ಯುವ ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಬ್ಯಾಾರಿಕೇಡ್ ಹತ್ತಿ ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಮೂವತ್ತಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Latest Posts

Don't Miss