Thursday, December 5, 2024

Latest Posts

ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ

- Advertisement -

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು

ಪರದಾಡುತ್ತಿರುವ ಸಂದರ್ಭದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹೌದು.. ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ರಸ್ತೆ ಮಧ್ಯದಲ್ಲಿಯೇ ಪರದಾಡುತ್ತಿರುವ ಸಂದರ್ಭದಲ್ಲಿ ರೆವಲ್ಯೂಷನ್ ಮೈಂಡ್ ನ ವಿನಾಯಕ ಜೋಗಿಶೆಟ್ಟರ್ ಎಂಬುವವರು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ‌. ತಕ್ಷಣವೇ ಕೇಶ್ವಾಪೂರ ಠಾಣೆ ಪಿಎಸ್ಐ ಬಾಬಾ ಅವರು, ಸ್ಥಳಕ್ಕೆ ಭೇಟಿ ನೀಡಿ ಆ ವ್ಯಕ್ತಿಯನ್ನು ರಕ್ಷಣೆ ಮಾಡಿ ಮತ್ತಷ್ಟು ವೈದ್ಯಕೀಯ ಉಪಚಾರಕ್ಕಾಗಿ ಅಂಬ್ಯುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ಕಳಿಸಿದ್ದಾರೆ.

ಬಿಡದೇ ಸುರಿಯಿತ್ತಿರುವ ಮಳೆಯಲ್ಲಿ ವೃದ್ಧರು ಹಾಗೂ ಭಿಕ್ಷುಕರು ಉಳಿದುಕೊಳ್ಳಲು ಯಾವುದೇ ವ್ಯವಸ್ಥೆ ಇಲ್ಲದೇ ಮಾರ್ಗಮಧ್ಯದಲ್ಲಿ ಪರದಾಡುವಂತಾಗಿದೆ. ಈ ನಿಟ್ಟಿನಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ಕರ್ತವ್ಯದ ಜೊತೆಗೆ ಇಂತಹ ಮಾನವೀಯ ಕಾರ್ಯಕ್ಕೆ ಕೈ ಜೋಡಿಸಿದ್ದು, ಶ್ಲಾಘನೀಯವಾಗಿದೆ.

- Advertisement -

Latest Posts

Don't Miss