Wednesday, July 2, 2025

Latest Posts

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ…!

- Advertisement -

Kundapuara News:

ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ನಡೆದಿದೆ. ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ .

ಪೂರ್ಣಿಮಾ ಹಾಗು ರವಿ ಆಚಾರ್ಯ ಕಳೆದ ಹದಿನಾರು ವರ್ಷಗಳ ಹಿಂದೆ ವಿವಾಹವಾಗಿದ್ದರು.ರವಿ ಹೆಮ್ಮಾಡಿ ಸಮೀಪದ ಬಗ್ದಾಡಿಯಲ್ಲಿ ಟಿಪ್ಪರ್‌ ಚಾಲಕನಾಗಿ ದುಡಿಯುತ್ತಿದ್ದು, ವಿಪರೀತ ಕುಡಿತದ ಚಟ ಹೊಂದಿರುವ ರವಿ ಕುಡಿದು ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ. ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.

ಸೀಮಂತ ಕಾರ್ಯಕ್ರಮಕ್ಕೆ ತೆರಳಿದ್ದ ಪೂರ್ಣಿಮಾ ಅವರನ್ನು ಪತಿ ಕರೆ ಮಾಡಿ ಮನೆಗೆ ಬರುವಂತೆ ಕೇಳಿಕೊಂಡಿದ್ದು,ಹೀಗಾಗಿ ಪೂರ್ಣಿಮಾ ಕಾರ್ಯಕ್ರಮ ಮುಗಿದ ಬಳಿಕ ಪತಿ ನೆಲೆಸಿದ್ದ ಬಾಡಿಗೆ ಮನೆಗೆ ತೆರಳಿ ಈ ಬಗ್ಗೆ ತಮ್ಮ ತಾಯಿಗೆಮಾಹಿತಿ ನೀಡಿದ್ದರು. ರಾತ್ರಿ ಪತಿ ಪತ್ನಿ ಮಧ್ಯೆ ಜಗಳವಾಗಿ ಈ ದುರಂತ ನಡೆದಿರುವ ಸಾಧ್ಯತೆ ಇರಬಹುದೆಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಟಿ ಶ್ರೀಕಾಂತ್‌ ಕೆ, ಸಿಪಿಐ ಗೋಪಿಕೃಷ್ಣ, ಠಾಣಾಧಿಕಾರಿ ಪವನ್‌ ನಾಯ್ಕ್‌ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಹಿಜಾಬ್ ವಿವಾದ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜಿನಿಂದ ಟಿಸಿ ಪಡೆದ 145 ವಿದ್ಯಾರ್ಥಿನಿಯರು

 

ಸಿದ್ದರಾಮಯ್ಯ ಆಹಾರ ಪದ್ಧತಿ ಹೇಳಿಕೆಗೆ ಎಚ್.ಡಿ.ಕೆ ಗರಂ

 

ಬೆಂಗಳೂರಿನಲ್ಲಿ ಭೀಕರ ಅಪಘಾತ: ಅಕ್ಕ-ತಮ್ಮ ದುರ್ಮರಣ

- Advertisement -

Latest Posts

Don't Miss