Sunday, September 8, 2024

Latest Posts

ಹೈದರಾಬಾದ್ ಗ್ಯಾಂಗ್ ರೇಪ್: ಬಂಧಿತರಲ್ಲಿ ಒಬ್ಬ ಟಿಆರ್‌ಎಸ್ ಪಕ್ಷದ ಮುಖಂಡನ ಮಗ..!

- Advertisement -

ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಒಬ್ಬ ಆಡಳಿತಾರೂಢ ಟಿಆರ್‌ಎಸ್ ಪಕ್ಷದ ಸ್ಥಳೀಯ ನಾಯಕನ ಮಗ ಎಂದು ಹೇಳಲಾಗುತ್ತಿದೆ.

ತೆಲಂಗಾಣದ ಹೈದರಾಬಾದ್ ನಗರದ ಜ್ಯುಬಿಲಿ ಹಿಲ್ಸ್‌ನಲ್ಲಿ ಶಾಲಾ ಬಾಲಕಿ ಮೇಲೆ ಕಳೆದ ವಾರ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅವರಲ್ಲಿ ಒಬ್ಬ ಆರೋಪಿ ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್ ಪಕ್ಷದ ಸ್ಥಳೀಯ ನಾಯಕನ ಮಗ ಎಂದು ತಿಳಿದುಬಂದಿದೆ.

ಶುಕ್ರವಾರ ಬಂಧಿಸಲಾದ ಆರೋಪಿಯನ್ನು ಸದುದ್ದೀನ್ ಮಲಿಕ್ (18) ಎಂದು ಗುರುತಿಸಲಾಗಿದೆ. ಶನಿವಾರ ಬಂಧಿತನಾದ ಮತ್ತೊಬ್ಬ ಮುಖ್ಯ ಆರೋಪಿ ಟಿಆರ್‌ಎಸ್ ಮುಖಂಡನ ಮಗ. ಇಬ್ಬರು ಬಾಲಾರೋಪಿಗಳಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಹೆಸರು ಬಹಿರಂಗಪಡಿಸಿಲ್ಲ, ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಐವರನ್ನು ಪೊಲೀಸರು ಗುರುತಿಸಿದ್ದು, ಅವರಲ್ಲಿ ಮೂವರು ಬಾಲಾರೋಪಿಗಳಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಮೇ 28ರಂದು ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್ ಪ್ರದೇಶದಲ್ಲಿ ಪಾರ್ಟಿಯೊಂದನ್ನು ಮುಗಿಸಿ ಮನೆಗೆ ಮರಳುತ್ತಿದ್ದ 17 ವರ್ಷದ ತರುಣಿಯ ಮೇಲೆ ಐವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ದೂರು ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳು ಮತ್ತು ಸಂತ್ರಸ್ತೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಎಲ್ಲ ಐವರು ಆರೋಪಿಗಳನ್ನು ಗುರುತಿಸಿದ್ದಾರೆ.

ಅಭಿಜಿತ್ ಕರ್ನಾಟಕ ಟಿವಿ ಬೆಂಗಳೂರು

- Advertisement -

Latest Posts

Don't Miss