Wednesday, June 12, 2024

Latest Posts

ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ: ಸಿಎಂ ಸಿದ್ದರಾಮಯ್ಯ

- Advertisement -

Political News: ಸಿಎಂ ಸಿದ್ದರಾಮಯ್ಯ ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಅವರು, ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಜೀವನದ ಟಾಪ್ ಸಿಕ್ರೇಟ್ ಬಿಚ್ಚಿಟ್ಟಿದ್ದಾರೆ.

ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ. ಇದಕ್ಕಾಗಿ ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ.

ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೇಲ್ಮನೆ ಚುನಾವಣೆ: ಜವರಾಯಿಗೌಡರ ಪರ ಜೆಡಿಎಸ್ ವರಿಷ್ಠರ ಒಲವು..?

ನಟಿ ಆಲಿಯಾ ಭಟ್‌ ವಿರುದ್ಧ ರೊಚ್ಚಿಗೆದ್ದ ನೆಟ್ಟಿಗರು: ಭಾರತ ಬಿಟ್ಟು ತೊಲಗು ಎಂದು ಆಕ್ರೋಶ

ಮಗುವಿನ ಲಿಂಗ ಪತ್ತೆಯ ಖುಷಿಗೆ ಪಾರ್ಟಿ ಆಚರಿಸಿದ ಯೂಟ್ಯೂಬರ್‌ಗೆ ಆರೋಗ್ಯ ಇಲಾಖೆಯಿಂದ ನೊಟೀಸ್

- Advertisement -

Latest Posts

Don't Miss