Thursday, December 26, 2024

Latest Posts

‘ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ’

- Advertisement -

Political News: ಸಿಎಂ ಸಿದ್ದರಾಮಯ್ಯನವರು, ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಉಡುಪು ಅವರವರ ಇಷ್ಟ. ನಾನು ಅದಕ್ಕೆ ಅಡ್ಡಿಯಾಗುವುದಿಲ್ಲ. ಹಿಜಬ್ ನಿಷೇಧವನ್ನನು ನಾವು ವಾಪಸ್ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು. ಈ ಹೇಳಿಕೆಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಬಿಜೆಪಿ ಹಿರಿಯ ನಾಯಕ ಯತ್ನಾಳ್, ಸಿದ್ದರಾಮಯ್ಯನವರು ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ. ಅವರಿಗಿಲ್ಲದ ಸಮವಸ್ತ್ರ ನೀತಿ ಹಿಂದೂಗಳಿಗೂ ಇಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರಿಗೆ ಮಾಹಿತಿಯ ಕೊರತೆ ಇದೆ, ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿ ಯಾವ ಆದೇಶವೂ ಇಲ್ಲ, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನೀತಿಯನ್ನು ಜಾರಿ ಮಾಡಿದ್ದು ಸ್ಥಳೀಯ ಕಾಲೇಜುಗಳು ನಿರ್ಧಾರ ಮಾಡಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹೇಳಿದ್ದರೂ, ರಾಜಕಾರಣಕ್ಕಾಗಿ ಶಾಲಾ ಕಾಲೇಜುಗಳ ಸಮವಸ್ತ್ರ ನೀತಿಯನ್ನೂ ಅಮಾನತು ಮಾಡುವ ಕೆಲಸವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.

ಓಲೈಕೆ ರಾಜಕಾರಣಕ್ಕೇನಾದರೂ ಮತ್ತೊಂದು ಹೆಸರು ಇದ್ದರೇ ಅದು ಕಾಂಗ್ರೆಸ್ ಪಕ್ಷ! ರಾಜ್ಯಾದ್ಯಂತ ಹಿಂದೂ ವಿದ್ಯಾರ್ಥಿಗಳೂ ಯಾವ ಬಟ್ಟೆಯಾದರೂ ಧರಿಸಿ ಕೇಸರಿ ಶಾಲು ಸಮೇತ ತರಗತಿಗಳಲ್ಲಿ ಭಾಗವಹಿಸುತ್ತಾರೆ, ಅವರಿಗೆ ಯಾವ ಕಿರುಕುಳ ನೀಡಬಾರದು ಎಂದು ಆಗ್ರಹಿಸುತ್ತಿದ್ದೇನೆ ಎಂದು ಯತ್ನಾಳ್ ಟ್ವೀಟ್ ಮಾಡಿದ್ದಾರೆ.

ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ಅಸಮಾಧಾನ: ಸಿದ್ದು ತಿರುಗೇಟು

ಉಡುಪಿ ಕೃಷ್ಣಮಠಕ್ಕೆ ಭೇಟಿ ಕೊಟ್ಟ ನಟಿ ಸಾಯಿ ಪಲ್ಲವಿ

ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -

Latest Posts

Don't Miss