Political News: ಬಿ.ವೈ.ವಿಜಯೇಂದ್ರ ಅವರು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಇಂದು ಪದಗ್ರಹಣ ಕಾರ್ಯಕ್ರಮವೂ ನಡೆಯಿತು. ಈ ಬಗ್ಗೆ ವಿಜಯೇಂದ್ರ ಟ್ವೀಟ್ ಮಾಡಿದ್ದು, ಬಿಜೆಪಿಯ ಎಲ್ಲ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ, ಮತ್ತೊಮ್ಮೆ ಮೋದಿಯವರನ್ನು ಭಾರತದ ಪ್ರಧಾನಿ ಮಾಡುವುದಾಗಿ, ಭರವಸೆ ನೀಡಿದ್ದಾರೆ.
ಮಾನ್ಯ ನಳೀನ್ ಕುಮಾರ್ ಕಟೀಲ್ ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ಸ್ವೀಕರಿಸಿದ ಈ ಅಮೃತ ಘಳಿಗೆಯಲ್ಲಿ ‘ಜನ ಸಂಘದ ದಿನಗಳು ತ್ಯಾಗ ಮೆರೆದ ಹಿರಿಯರು, ಪರಿಶ್ರಮದ ಕಾರ್ಯಕರ್ತರು ಕಣ್ಣ ಮುಂದೆ ಹಾದು ಹೋದರು’. ದಿಗ್ಗಜರು, ಪುಣ್ಯವಂತರು ಸೇವೆ ಸಲ್ಲಿಸಿದ ಸಾಲಿನಲ್ಲಿ ನಾನೂ ಸೇರ್ಪಡೆಯಾಗುವ ಸುಯೋಗ ಕಲ್ಪಿಸಿದ ಪಕ್ಷದ ವರಿಷ್ಠರ ತೀರ್ಮಾನ ನೆನೆದು ಭಾವುಕನಾದೆನು, ಒಬ್ಬ ಕಾರ್ಯಕರ್ತನಾಗಿ ಹೆಮ್ಮೆ ಎನಿಸಿತು, ಜವಾಬ್ದಾರಿ ಎಚ್ಚರಿಸಿತು. ವರಿಷ್ಠರ ನಿರೀಕ್ಷೆ, ಕಾರ್ಯಕರ್ತರ ಅಪೇಕ್ಷೆ ಗುರಿ ತಲುಪುವ ನಿಟ್ಟಿನಲ್ಲಿ ‘ವಹಿಸಿರುವುದು ಅಧಿಕಾರವಲ್ಲ ಹೊಣೆಗಾರಿಕೆ’ ಎಂದರಿತು ಕಾರ್ಯಕರ್ತನಾಗಿ ಹೆಜ್ಜೆ ಇಡಲಿದ್ದೇನೆ, ಪಕ್ಷ ಸದೃಢಗೊಳಿಸಲು ಪಕ್ಷದ ಪ್ರತಿಯೊಬ್ಬ ಪ್ರಮುಖರೂ ನನ್ನೊಂದಿಗೆ ಹೆಗಲು ಕೊಡಲು ಮುಂದಾಗಿರುವುದು ನನ್ನಲ್ಲಿ ಅಮಿತೋತ್ಸಾಹ ತುಂಬಿದೆ.
ಮಾನ್ಯ ಪ್ರಧಾನಿ ನರೇಂದ್ರ ಮೋದಿಜ , ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಜೆಪಿ ನಡ್ಡಾಜಿ, ಗೃಹಸಚಿವರಾದ ಮಾನ್ಯ ಅಮಿತ್ ಶಾಜಿ ಹಾಗೂ ಪೂಜ್ಯ ಯಡಿಯೂರಪ್ಪನವರು, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಾನ್ಯ ಬಿ.ಎಲ್.ಸಂತೋಷ್‌ಜಿ, ಪಕ್ಷದ ಹಿರಿಯರೆಲ್ಲರ ಆಶೀರ್ವಾದ, ಮಾರ್ಗದರ್ಶನ, ಸಹಕಾರದೊಂದಿಗೆ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ನವ ಚೈತನ್ಯ ತುಂಬಿ 2024ರ ಲೋಕಸಭಾ ಚುನಾವಣೆಯಲ್ಲಿ 2019 ರ ಚುನಾವಣೆಯ ಫಲಿತಾಂಶ ಮತ್ತೆ ಮರುಕಳಿಸಿ ಮಗದೊಮ್ಮೆ ಮೋದಿ ಜೀ ಪ್ರಧಾನಿಯಾಗಿ ಭಾರತ ಪ್ರಜ್ವಲಿಸಲು ‘ಕರುನಾಡ ಜಯದ ಕಿರೀಟ’ ಸಮರ್ಪಿಸಬೇಕೆಂದು ಛಲ ಹೊತ್ತ ಕಾರ್ಯಕರ್ತರ ಪಡೆಯೊಂದಿಗೆ ಸಂಕಲ್ಪ ತೊಟ್ಟಿರುವೆ. ಈ ನಿಟ್ಟಿನಲ್ಲಿ ರಾಜ್ಯದ ಸಮಸ್ತ ಜನತೆಯ ಕೃಪಾಶೀರ್ವಾದ ಬೇಡುವೆ ಎಂದು ವಿಜಯೇಂದ್ರ ಟ್ವೀಟ್ ಮಾಡುವ ಮೂಲಕ, ಭರವಸೆ ನೀಡಿದ್ದಾರೆ.
ಮಾನ್ಯ @nalinkateel ಅವರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ಸ್ವೀಕರಿಸಿದ ಈ ಅಮೃತ ಘಳಿಗೆಯಲ್ಲಿ ‘ಜನ ಸಂಘದ ದಿನಗಳು
ತ್ಯಾಗ ಮೆರೆದ ಹಿರಿಯರು,
ಪರಿಶ್ರಮದ ಕಾರ್ಯಕರ್ತರು
ಕಣ್ಣ ಮುಂದೆ ಹಾದು ಹೋದರು’.ದಿಗ್ಗಜರು, ಪುಣ್ಯವಂತರು ಸೇವೆ ಸಲ್ಲಿಸಿದ
ಸಾಲಿನಲ್ಲಿ ನಾನೂ ಸೇರ್ಪಡೆಯಾಗುವ ಸುಯೋಗ ಕಲ್ಪಿಸಿದ ಪಕ್ಷದ ವರಿಷ್ಠರ ತೀರ್ಮಾನ… pic.twitter.com/q9oez5UfPR— Vijayendra Yediyurappa (@BYVijayendra) November 15, 2023
‘ಬಿಜೆಪಿಯವರು ಯಾರೂ ದೇಶದ ಸ್ವಾತಂತ್ರ್ಯಕ್ಕಾಗಿ ಅಪ್ಪಿತಪ್ಪಿಯೂ ಹೋರಾಡಿದವರಲ್ಲ’
ಮೊಹಬ್ಬತ್‌ಕಿ ದುಕಾನ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ: ಹಿಂದಿ ಬೇಡಾ, ಕನ್ನಡದ ಹೆಸರಿಡಿ ಎಂದ ನೆಟ್ಟಿಗರು
ನಾನು ಅನ್‌ಮ್ಯಾರೀಡ್ ಎಂದು ಸುಳ್ಳು ಹೇಳಿದ ಸಂತೋಷ್: ಹಳ್ಳಿಕಾರ್‌ಗೆ 2 ವರ್ಷದ ಮಗುನೂ ಇದೆಯಾ..?