Sports News ನವದೆಹಲಿ: ಬಿಜೆಪಿ ಸಂಸದ ಬ್ರಿಭೂಷಣ ಮೇಲೆ ಕಿರುಕುಳ ಆರೋಪ ಮಾಡಿ, ಕುಸ್ತಿಪಟುಗಳು ಹಲವು ದಿನಗಳಿಂದ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ ಬಿಜೆಪಿ ನಾಯಕ ಅಮಿತ್ ಶಾ ನಿವಾಸದಲ್ಲಿ ಕುಸ್ತಿಪಟುಗಳು ಈ ಬಗ್ಗೆ ಮಾತುಕತೆ ನಡೆಸಿದ್ದು, ತಪ್ಪು ಯಾರದ್ದೇ ಇದ್ದರೂ, ತಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಮಿತ್ ಶಾ ತಿಳಿಸಿದ್ದಾರೆ.
ಹೀಗಾಗಿ ಇಂದು ಮಹಿಳಾ ಕುಸ್ತಿಪಟು ಸಾಕ್ಷಿ ಮಲೀಕ್, ಪ್ರತಿಭಟನೆಯಲ್ಲಿ ಭಾಗಿಯಾಗದೇ, ರೈಲ್ವೆ ಇಲಾಖೆಯಲ್ಲಿ ತಮ್ಮ ಕೆಲಸ ಮುಂದುವರೆಸಿದ್ದಾರೆ. ಈ ಬಗ್ಗೆ ಕೆಲ ಮಾಧ್ಯಮಗಳು, ಸಾಕ್ಷಿ ಮಲೀಕ್ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂಬ ಸುದ್ದಿ ಹಬ್ಬಿಸಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಸಾಕ್ಷಿ ಮಲೀಕ್, ದಯವಿಟ್ಟು ಯಾರೂ ಸುಳ್ಳು ಸುದ್ದಿ ಹಬ್ಬಿಸಬೇಡಿ.
ಈ ಘಟನೆಗೆ ನ್ಯಾಯ ದಕ್ಕುವವರೆಗೂ ನಾವ್ಯಾರು ಪ್ರತಿಭಟನೆಯಿಂದ ದೂರ ಸರಿಯುವ ಮಾತೇ ಇಲ್ಲ. ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ. ಸರಿಯುವುದೂ ಇಲ್ಲ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ನಾನು ಸತ್ಯಾಗ್ರಹದ ಜೊತೆಗೆ, ರೈಲ್ವೆ ಇಲಾಖೆಯಲ್ಲಿ ನನ್ನ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ ಎಂದು ಸಾಕ್ಷಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪ್ರತಿಭಟನೆ ಮುಂದುವರಿಸುತ್ತೇವೆಂದು ಹೇಳಿದ್ದಾರೆ.
ये खबर बिलकुल ग़लत है। इंसाफ़ की लड़ाई में ना हम में से कोई पीछे हटा है, ना हटेगा। सत्याग्रह के साथ साथ रेलवे में अपनी ज़िम्मेदारी को साथ निभा रही हूँ। इंसाफ़ मिलने तक हमारी लड़ाई जारी है। कृपया कोई ग़लत खबर ना चलाई जाए। pic.twitter.com/FWYhnqlinC
— Sakshee Malikkh (@SakshiMalik) June 5, 2023
‘ಬೆಂಗಳೂರಿನ ವೈಭವ, ಗೌರವವನ್ನು ಮರಳಿ ತರಲು ಕಾಂಗ್ರೆಸ್ ಸರ್ಕಾರ ಬದ್ಧ’